ಪ್ರೊ. ಚಂದ್ರಶೇಖರ ಪಾಟೀಲ (ಚಂಪಾ) ಅವರಿಗೆ ನುಡಿನಮನ

0
7

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಪ್ರೊ. ಚಂಪಾ ಅವರ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಲಾ ನಿಕಾಯದ ಡೀನರಾದ ಪ್ರೊ. ರಮೇಶ ರಾಠೋಡ ಮಾತನಾಡಿ ಚಂಪಾ ಅವರು ಶ್ರೇಷ್ಠ ಪ್ರಾಧ್ಯಾಪಕರಾಗಿದ್ದು ಕನ್ನಡ ಹಾಗೂ ಇಂಗ್ಲಿಷ ಭಾಷೆಯಲ್ಲಿ ಪ್ರೌಢಿಮೆ ಹೊಂದಿದ್ದರು, ಅಷ್ಟೇ ಅಲ್ಲ ಅವರೊಬ್ಬ ಮಾನವೀಯ ಮೌಲ್ಯಗಳ ಪ್ರತಿಪಾದಕ ರಾಗಿದ್ದರು ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಚ್.ಟಿ. ಪೋತೆಯವರು ಮಾತನಾಡಿ ಚಂದ್ರಶೇಖರ ಪಾಟೀಲ ಅವರು ಬಡವರ, ನಿರ್ಗತಿಕರ ಬಗ್ಗೆ ಅಪಾರ ಕಾಳಜಿ ಹೊಂದಿದವ ರಾಗಿದ್ದರು. ಬಂಡಾಯ ಚಳವಳಿಯ ಮುಂಚೂಣಿ ನಾಯಕರಾಗಿದ್ದರು. ಅವರು ಬರೆದಿರುವ ಕೃತಿಗಳು ಕನ್ನಡ ನಾಡು-ನುಡಿಯ ಪ್ರೇಮವನ್ನು ಸೂಚಿಸುತ್ತದೆ.

Contact Your\'s Advertisement; 9902492681

’ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ’ ಎಂಬುದು ಚಂಪಾ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದಾಗಿನ ಮುಖ್ಯ ಘೋಷವಾಕ್ಯವಾಗಿತ್ತು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಶ್ರೇಷ್ಠ ವಿಚಾರವಾದಿ ಹಾಗೂ ಬಂಡಾಯ ಪ್ರಜ್ಞೆಯ ಲೇಖಕನೊಬ್ಬನನ್ನು ಕಳೆದುಕೊಂಡಿದ್ದೇವೆ ಎಂದು ಅಭಿಪ್ರಾಯಪಟ್ಟರು. ವೇದಿಕೆಯ ಮೇಲೆ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಡಾ. ನಿಂಗಣ್ಣ, ಯಾದಗಿರಿಯ ಸರಕಾರಿ ಮಹಾವಿದ್ಯಾಲಯದ ಕನ್ನಡ ಸಹಪ್ರಾಧ್ಯಾಪಕರಾದ ಡಾ. ಅಶೋಕಕುಮಾರ ಮಟ್ಟಿ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಹಾಗೂ ಇಂಗ್ಲಿಷ ವಿಭಾಗದ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಡಾ. ಸಿದ್ಧಲಿಂಗ ದಬ್ಬಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here