ಭಾಲ್ಕಿ: ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಚಂಪಾ ಅವರಿಗೆ ಭಾವಪೂರ್ಣ ಶೃದ್ಧಾಂಜಲಿ ಕಾರ್ಯಕ್ರಮವನ್ನು ನೆರವೇರಿತ್ತು.
ಕಾರ್ಯಕ್ರಮದ ಸಾನಿಧ್ಯ ವಹಿಸಿ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಕನ್ನಡ ಸಾಹಿತ್ಯದಲ್ಲಿ ಅಪೂರ್ವ ಸೇವೆಗೈದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಪ್ರೊ.ಚಂದ್ರಕಾಂತ ಪಾಟೀಲ (ಚಂಪಾ) ಅವರು ನಿಧನಗೊಂಡಿರುವುದು ಎಲ್ಲಾ ಕನ್ನಡ ಮನಸ್ಸುಗಳಿಗೆ ನೋವನ್ನುಂಟು ಮಾಡಿದೆ. ಕನ್ನಡಪರ ಹೋರಾಟದಲ್ಲಿ ಚಂಪಾ ಅವರು ಮುಂಚೂಣಿಯಲ್ಲಿದ್ದ ನಾಯಕರು. ಸಂಕ್ರಮಣ ಪತ್ರಿಕೆಯ ಸಂಪಾದಕರಾಗಿ ಕನ್ನಡ ಮನಸ್ಸುಗಳಲ್ಲಿ ವೈಚಾರಿಕತೆಯ ಅರಿವನ್ನು ಮೂಡಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅನೇಕ ವೈಶಿಷ್ಟ್ಯಪೂರ್ಣವಾದಂತಹ ಕಾರ್ಯಗಳನ್ನು ಮಾಡಿದರು.
ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯ ಮೇಲೆ ಅವರಿಗೆ ಅಪಾರ ಗೌರವ. ಅದಕ್ಕಾಗಿಯೇ ಅವರು ಮಠ ವ್ಯವಸ್ಥೆಯನ್ನು ಒಪ್ಪದಿದ್ದರೂ ಅವರು ಭಾಲ್ಕಿ ಹಿರೇಮಠ ಗಡಿಭಾಗದಲ್ಲಿ ಮಾಡಿರುವ ಮಾಡುತ್ತಿರುವ ಕನ್ನಡ ಕಟ್ಟುವ ಕೆಲಸವನ್ನು ಅತ್ಯಂತ ಗೌರವದಿಂದ ಕಾಣುತ್ತಿದ್ದರು. ಅವರು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮೇಲೆ ಶ್ರೀಮಠಕ್ಕೆ ಭೇಟಿ ನೀಡಿ ಕನ್ನಡದ ಮಠ ಕನ್ನಡ ಪಟ್ಟದ್ದೇವರೆಂದು ಭಾವಿಸಿ ತಮ್ಮ ದರ್ಶನಕ್ಕೆ ಬಂದಿದ್ದೇನೆ ಎಂದು ಅಭಿಮಾನದಿಂದ ಹೇಳಿದ್ದು ಸ್ಮರಿಸುತ್ತಾ ಅವರಿಗೆ ಭಾವಪೂರ್ಣ ಶೃದ್ಧಾಂಜಲಿಯನ್ನು ಅರ್ಪಿಸಿದರು.
ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು, ಪೂಜ್ಯ ಶ್ರೀ ನಿರಂಜನ ಮಹಾಸ್ವಾಮಿಗಳು, ಶ್ರೀ ರಮೇಶ ಪಟ್ನೆ, ಶ್ರೀ ಶಾಂತಯ್ಯ ಸ್ವಾಮಿ, ಶ್ರೀ ನಾಗರಾಜ ಗೊರನಾಳೆ, ಶ್ರೀ ರಾಜು ಜುಬರೆ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…