ಆಳಂದ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ನಿರಂತರವಾಗಿ ತಾಲೂಕಿನಲ್ಲಿ ಜನಪರ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಶ್ಲಾಘನೀಯವಾಗಿದೆ ಎಂದು ಶಾಸಕ ಸುಭಾಷ ಗುತ್ತೇದಾರ ಅವರು ಹೇಳಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಚೇರಿಯ ಸ್ಥಳಾಂತರಗೊಂಡು ಪಟ್ಟಣದ ಜೈನ್‌ಬಸದರಿಯಲ್ಲಿ ಆರಂಭಿಸಿದ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ, ಸ್ವಚ್ಛತೆ, ಕೆರೆಗಳ ಹೂಳೆತ್ತುವ ಜೊತೆಗೆ ಮಹಿಳಾ ಸಂಘಗಳ ಮೂಲಕ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಮಾಡುವಲ್ಲಿ ಧರ್ಮಸ್ಥಳ ಸಂಸ್ಥೆ ಅಗತ್ಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು. ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಶಿವರಾಯ ಪ್ರಭು ಮಾತನಾಡಿ, ತಾಲೂಕಿನ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ೭ವಲಯಗಳಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯ ಚಟುವಟಿಕೆ ನಡೆಯುತ್ತಿವೆ ಎಂದರು.
ಪುರಸಭೆ ಅಧ್ಯಕ್ಷೆ ರಾಜಶ್ರೀ ಶ್ರೀಶೈಲ ಖಜೂರಿ, ಪ್ರದೀಪ ಶಹಾ, ರವಿ ಪಾಟೀಲ, ಬಾಬುರಾವ್ ಮಡ್ಡೆ, ಚನ್ನು ಪಾಟೀಲ, ಸಂಸ್ಥೆಯ ಜಿಲ್ಲಾ ಸಂಯೋಜನಾಧಿಕಾರಿ ಸತೀಶ ಸುವರ್ಣ, ತಾಲೂಕು ಯೋಜನಾಧಿಕಾರಿ ಕೃಷ್ಣಪ್ಪ ಬೆಳವಣಕಿ, ಜಾನಪದ ಪರಿಷತ್ ಅಧ್ಯಕ್ಷ ಅಪ್ಪಸಾಹೇಬ ತೀರ್ಥೆ, ವೀರಭದ್ರ ಹಾರಕೆ, ಎಚ್.ಎಂ. ರೆಡ್ಡಿ, ಶ್ರೀಶೈಲ ಖಜೂರಿ ಮತ್ತಿತರು ಇದ್ದರು. ಆರಂಭದಲ್ಲಿ ಅಚಕರಿಂದ ವಿಶೇಷ ಪೂಜೆ, ಅರ್ಚನೆ ಪೂರ್ಣಹುತಿ, ದೀಪಾರತಿ ಕೈಗೊಳ್ಳಲಾಯಿತು.