ಸುರಪುರ: ಕೊಡೇಕಲ್ ಅಲ್ಲಮಪ್ರಭು ಜ್ಞಾನ ವಿಕಾಸ್ ಕೇಂದ್ರ ಸಭೆಯಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ರೇಣುಕಾ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಿದ್ಯಾಲತಾ ಅವರು ಮಾತನಾಡಿ,ಇಂದು ಮಹಿಳೆಯರಿಗೆ ಶಿಕ್ಷಣ ಎಂಬುದು ಅತ್ಯವಶ್ಯಕವಾಗಿದೆ,ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರದಂತೆ ಆದ್ದರಿಂದ ಎಲ್ಲರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದರು.ಅಲ್ಲದೆ ದೇಶದ ಮೊದ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರ ಕುರಿತು ಎಲ್ಲರಿಗು ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಸಂಸ್ಥೆಯ ಸೇವಾ ಪ್ರತಿನಿಧಿ ಸವಿತಾ ಹಾಗು ಸೇವಾ ಪ್ರತಿನಿಧಿಗಳು,ಕೇಂದ್ರ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಆಯುಷ್ಯ ಜ್ಞಾನ ವಿಕಾಸ ಸಭೆ ಆರೋಗ್ಯ ಅರಿವು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ವತಿಯಿಂದ ಕೊಡೇಕಲ್ ಆಯುಷ್ಯ ಜ್ಞಾನ ವಿಕಾಸ್ ಕೇಂದ್ರ ಸಭೆಯಲ್ಲಿ ಆರೋಗ್ಯ ಅರಿವು ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ:ವೀಣಾ ಮಾತನಾಡಿ,ಕ್ಯಾನ್ಸರ್ ಮತ್ತು ಗರ್ಭಕೋಶದ ಕ್ಯಾನ್ಸರ್ ಮತ್ತು ಅದರ ಲಕ್ಷಣಗಳು,ಅದರ ವಿಧಗಳು ಮತ್ತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ ನೀಡಿದರು.
ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಸಂತೋಷ ಮಾತನಾಡಿ,ಜ್ಞಾನ ವಿಕಾಸ್ ಕೇಂದ್ರದ ಕಾರ್ಯಯೋಜನೆಗಳು ಮತ್ತು ಆಶಯಗಳ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಮಂಜುನಾಥ,ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸವಿತಾ ಹಾಗು ಸೇವಾ ಪ್ರತಿನಿಧಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.