ಶಹಾಬಾದ: ನಾವು ಆರೋಗ್ಯವಾಗಿರಲು ರೋಗನಿರೋಧಕ ಶಕ್ತಿ ಅಗತ್ಯವಾಗಿದ್ದು, ಅದಕ್ಕಾಗಿ ಮಕ್ಕಳು ಹಸಿರು ತರಕಾರಿ, ಹಣ್ಣುಗಳನ್ನು ತಿನ್ನುವ ರೂಢಿಯನ್ನು ಹಾಕಿಕೊಳ್ಳಬೇಕೆಂದು ಆರ್‌ಬಿಎಸ್‌ಕೆ ವೈದ್ಯ ಡಾ. ಮಹ್ಮದ್ ಮತೀನ್ ಅಲಿ ಹೇಳಿದರು.
ಅವರು ಮಂಗಳವಾರ ನಗರದ ಎಸ್.ಜಿ.ವರ್ಮಾ ಹಿಂದಿ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಿ ಮಾತನಾಡಿದರು.
ಮಕ್ಕಳು ಆದಷ್ಟು ಹೊರಗಿನ ತಿಂಡಿಗಳಾದ ಎಣ್ಣೆಯಲ್ಲಿ ಕರಿದ ಪದಾರ್ಥ, ಪಾಕೆಟ್ ಪದಾರ್ಥಗಳನ್ನು ಹಾಗೂ ಲಘು ತಿಂಡಿಗಳಿಗೆ ಮೊರೆ ಹೋಗದೇ ಮನೆಯಲ್ಲಿ ತಯ್ಯಾರು ಮಾಡಿದ ಆಹಾರವನ್ನು ಸೇವಿಸಿ.ಅದರಲ್ಲೂ ಮೊಳಕೆ ಬಂದ ಬೇಳೆ ಕಾಳುಗಳು, ಬಾಳೆ ಹಣ್ಣು, ಬೆಳ್ಳುಳ್ಳಿ, ಈರುಳ್ಳಿ ಮೊದಲಾದವುಗಳನ್ನು ಸೇವಿಸುವುದರಿಂದ ಅದರಲ್ಲಿರುವ ಜೀವ ಸತ್ವಗಳು ದೇಹದಲ್ಲಿ ಸೇರ್ಪಡೆಯಾಗಿ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ ಎಂದರು.
ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ವ್ಯಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡುವುದಲ್ಲದೇ,ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆಗಾಗ ಕೈ ತೊಳೆದುಕೊಳ್ಳಬೇಕುಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು.ಬಿಸಿ ನೀರು ಕುಡಿಯುತ್ತಿರಬೇಕು.ನೆಗಡಿ,ಜ್ವರ, ಕೆಮ್ಮು ಕಂಡು ಬಂದರೆ ಕೂಡಲೇ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕೆಂದು ಹೇಳಿದರು.
ಮುಖ್ಯಗುರುಳಾದ ದಮಯಂತಿ ಸೂರ್ಯವಂಶಿ,ಬಾಬಾ ಸಾಹೇಬ ಸಾಳುಂಕೆ, ಮಹೇಶ್ವರಿ ಗುಳಿಗಿ, ವಿಜಯಲಕ್ಷ್ಮಿ ವೆಂಕಟೇಶ, ರಾಜೇಶ್ವರಿ.ಎಮ್, ಆರ್‌ಬಿಎಸ್‌ಕೆ ತಂಡದ ಶಿವಲೀಲಾ ಇತರರು ಇದ್ದರು. ಮಕ್ಕಳಲ್ಲಿ ಆರೋಗ್ಯದಲ್ಲಿ ನ್ಯೂನತೆ ಕಂಡು ಬಂದವರಿಗೆ ನಗರದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆಗೆ ಹೋಗಿ ತಪಾಸಣೆಗೆ ಒಳಗಾಗಬೇಕೆಂದು ಲಿಖಿತ ಪತ್ರ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…