ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಅಂಗನವಾಡಿ ನೌಕರರಿಂದ ಪ್ರತಿಭಟನೆ

0
9

ಶಹಾಬಾದ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸೋಮವಾರ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿ ಗ್ರೇಡ್-೨ ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಅಂಗನವಾಡಿ ನೌಕರರು ಸದಾ ದುಡಿಯುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಫ್ರಂಟ್‌ಲೈನ್ ವಾರಿಯರ್ಸ್ ಆಗಿ ದುಡಿದು ೫೯ ಜನರು ಬಲಿದಾನವಾಗಿದ್ದಾರೆ. ಮಾತ್ರವಲ್ಲದೆ, ೨೯೩ ಜನರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಕೆಲವರು ಕುಟುಂಬದವರನ್ನು ಕಳೆದುಕೊಂಡು ಒಂಟಿಯಾಗಿದ್ದಾರೆ.

Contact Your\'s Advertisement; 9902492681

ಕೊರೊನಾ ಲಾಕ್‌ಡೌನ್ ಇದ್ದಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿ ೨೦೨೦ (ಎನ್‌ಇಪಿ)ನ್ನು ತಂದಿದೆ. ಐಸಿಡಿಎಸ್ ಯೋಜನೆಗೆ ಸಂಬಂಧಿಸಿ ೩ ರಿಂದ ೬ ವ? ಅಂದರೆ ೩೬ ತಿಂಗಳ ಮಗುವಿನಿಂದ ೫ ವ? ೧೦ ತಿಂಗಳ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ದಾಖಲಾಗುತ್ತಿದ್ದರು. ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಲ್ಲಿ ಅನಿಯಮಿತವಾಗಿ ಎಲ್.ಕೆ.ಜಿ – ಯು.ಕೆ.ಜಿ.ಗಳನ್ನು ತೆರೆದಿದ್ದರಿಂದ ಅಂಗನವಾಡಿ ಕೇಂದ್ರಕ್ಕೆ ಈಗಾಗಲೇ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ೫ ವ? ತುಂಬುವುದಕ್ಕೆ ಮೊದಲು ಎನ್‌ಇಪಿಯ ಪ್ರಕಾರ ೫ ವ?ದ ಮಕ್ಕಳಿಗೆ ಬಾಲವಾಟಿಕಾ ಎನ್ನುವ ಪ್ರತ್ಯೇಕ ವ್ಯವಸ್ಥೆ ಮಾಡಿದರೆ ಅಂಗನವಾಡಿಗಳಲ್ಲಿ ಕೇವಲ ೩ ವ?ದ ಮಕ್ಕಳು ಮಾತ್ರ ಇರುತ್ತಾರೆ. ಮಕ್ಕಳ ರಾಷ್ಟ್ರೀಯ ನೀತಿ ಮತ್ತು ಗುರಿಗಳನ್ನು ಸಾಧಿಸಲು ಸಾಧ್ಯವಿಲ್ಲ ಎಂದರು.

ಅಂಗನವಾಡಿ ನೌಕರರನ್ನು ಐಸಿಡಿಎಸ್‌ನ ೫ ಉದ್ದೇಶಗಳಿಗೆ ಬಿಟ್ಟು ಉಳಿದ ಹೆಚ್ಚುವರಿ ಕೆಲಸ ನಿಬಂಧಿಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು ನೀಡಬೇಕು.ಹೊಸ ಶಿಕ್ಷಣ ನೀತಿಯ ಶಿಫಾರಸ್ಸಿನಲ್ಲಿರುವ ೩ ರಿಂದ ೮ ವ?ದ ವರ್ಗೀಕರಣವನ್ನು ಕೈ ಬಿಡಬೇಕು.ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಶಿಫಾರಸ್ಸು ಮಾಡಿರುವ ೩೩೯.೪೮ ಲಕ್ಷ ಅನುದಾನ ಬಿಡುಗಡೆ ಮಾಡಿ.ಕೊರೋನಾ ಸಂದರ್ಭದಲ್ಲಿ ನಿಧನರಾದ ಕುಟುಂಬದವರಿಗೆ ಮಗಳು ಇಲ್ಲದಿದ್ದಾಗ ಸೊಸೆಗೆ ಅವರ ಹುದ್ದೆ ಕೊಡಬೇಕು.ಅನುಕಂಪದ ಆಧಾರದಲ್ಲಿ ಕೆಲಸ ಕೊಡುವಾಗ ಮಗಳು ಬದಲಿಗೆ ಸೊಸೆ ಎಂದು ಬದಲಿಸಬೇಕು.

ಕೊರೋನಾ ವಾರಿಯರ‍್ಸ ಆಗಿ ಕೆಲಸ ಮಾಡಿ ಸೋಂಕಿತರಾಗಿ ನಿಧನರಾದ ಅಂಗನವಾಡಿ ನೌಕರರಿಗೆ ಕೂಡಲೇ ೩೦ ಲಕ್ಷ ಪರಿಹಾರ ಬಿಡುಗಡೆ ಮಾಡಬೇಕು.ಕೊರೋನಾ ಸಂದರ್ಭದಲ್ಲಿ ಕೆಲಸದ ಒತ್ತಡದಿಂದ ಮೃತರಾದವರಿಗೆ ಮರಣ ಪರಿಹಾರ ೧ ಲಕ್ಷ ರೂ. ಕೊಡಬೇಕು.ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮತ್ತು ಐಎಲ್‌ಸಿ ಶಿಫಾರಸ್ಸಿನಂತೆ ನೌಕರರಂತೆ ಗುರುತಿಸಿ ಕನಿ? ವೇತನ ಜಾರಿ ಮಾಡಬೇಕು.

ಅಂಗನವಾಡಿ ನೌಕರರನ್ನು ಖಾಯಂ ಮಾಡಬೇಕು. ಮಾಡುವ ತನಕ ೨೬ ಸಾವಿರ ವೇತನ ಕೊಡಬೇಕು. ಜೆಟ್‌ನಲ್ಲಿ ಕಡಿತವಾಗಿರುವ ೮೪೫೨.೩೮ ಕೋಟಿ ಹಣ ವಾಪಸ್ ನೀಡಬೇಕು.ಐಸಿಡಿಎಸ್ ಯೋಜನೆಗೆ ಅನುದಾನವನ್ನು ಹೆಚ್ಚಳ ಮಾಡಿ ದೇಶದ ಮಕ್ಕಳ ಮತ್ತು ಮಹಿಳೆಯರನ್ನು ರಕ್ಷಿಸಬೇಕು.ಬಿಎಲ್‌ಒ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈ ಬಿಡಬೇಕು.ಅಂಗನವಾಡಿ ಕೇಂದ್ರಗಳ ಬಾಡಿಗೆಗೆ ಇರುವ ಮಾನದಂಡ ತೆಗೆಯಬೇಕು. ಆಯಾ ತಿಂಗಳಲ್ಲೇ ಬಾಡಿಗೆ ಹಣ ಬಿಡುಗಡೆ ಮಾಡಬೇಕು.ಎಂಬ ಬೇಡಿಕೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಅಧ್ಯಕ್ಷೆ ಶೇಖಮ್ಮ ಕುರಿ, ಪ್ರಧಾನ ಕಾರ್ಯದರ್ಶಿ ರುದ್ರಮ್ಮ ಕಟ್ಟಿಮನಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here