ಕೂಲಿ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಪ್ರತಿ ಆರು ತಿಂಗಳಿಗೊಮ್ಮೆ ಬಿಪಿ,ಶುಗರ್ ಗಳನ್ನು ಪರೀಕ್ಷಿಸಿಕೊಳ್ಳಬೇಕು ನಿಮ್ಮ ಆರೋಗ್ಯವೇ ನಮ್ಮ ಕಾಳಜಿ ಎಂದು ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಗಳಾದ ಎಂ.ಡಿ ಇಸ್ಮಾಯಲ್ ತಿಳಿಸಿದರು.
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಾಜಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಭರತನೂರು ಗ್ರಾಮದಲ್ಲಿ ತಾಲೂಕು ಪಂಚಾಯತಿ ಕಾಳಗಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕೂಲಿಕಾರ್ಮಿಕರಿಗೆ ತಮ್ಮ ಕೆಲಸದ ಸ್ಥಳದಲ್ಲಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೂಲಿ ಕಾರ್ಮಿಕರು ಎಂದರೆ ಕೇವಲ ನರೇಗಾ ಯೋಜನೆಯಡಿ 100 ದಿನ ಅವರಿಗೆ ಕೆಲಸ ನೀಡುವುದು ಅಷ್ಟೇ ಅಲ್ಲ, ಅವರ ಆರೋಗ್ಯದ ಕಡೆಯೂ ಗಮನ ಹರಿಸುವುದು ನಮ್ಮ ಕರ್ತವ್ಯವಾಗಿದೆ. ಕೂಲಿಗಾರರಿಗೆ ಯಾವುದೇ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಇದ್ದರು ಅದನ್ನು ನಿರ್ಲಕ್ಷ ಮಾಡದೆ ಶೀಘ್ರದಲ್ಲಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಕರೋನ್ ದಿಂದ ಜನರು ಎಚ್ಚರಿಕೆಯ ಜೀವನ ನಡೆಸಬೇಕಾಗಿದೆ. ಜನರಿಂದ ಅಂತರ ಕಾಪಾಡುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಹಾಗೂ ಕಡ್ಡಾಯವಾಗಿ ಎರಡು ಡೋಸ್ ಕೋವಿಡ ಲಸಿಕೆಯನ್ನು ಹಾಕಿಸಿಕೊಳ್ಳುವುದು ಉತ್ತಮ ಎಂದು ಅವರು ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿದರು.
ಮಂಗಲಗಿಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾಕ್ಟರ ದೀಪಕ್ ಕುಮಾರ್ ರಾಥೋಡ್ ಅವರು ಮಾತನಾಡಿ, ನಮಗೆ ಪ್ರಮುಖವಾಗಿ ಜೀವನ ನಡೆಸಲು ಬೇಕಾದದ್ದು ನಮ್ಮ ಆರೋಗ್ಯ. ಆರೋಗ್ಯವೇ ಭಾಗ್ಯ ಎಂಬಂತೆ ಮೊದಲು ನಮ್ಮ ಆರೋಗ್ಯ ಚೆನ್ನಾಗಿದ್ದರೆ ನಮ್ಮ ಜೀವನ ಕೂಡ ಚೆನ್ನಾಗಿರಲು ಸಾಧ್ಯ. 30 ವರ್ಷದ ನಂತರ ಬಿಪಿ ಶುಗರ್ ಬರುವುದು ಸಹಜ ಅದಕ್ಕೆ ಹೆದರದೆ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಅವರು ಸಲಹೆಯನ್ನು ನೀಡಿದರು.
ಇದೇ ಸಂದರ್ಭದಲ್ಲಿ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿರುವ ಕೂಲಿಕಾರ್ಮಿಕರಿಗೆ ಮಾಸ್ಕ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಜಿಲ್ಲಾ ಸಮನ್ವಯ ಕಾರ್ಯಕ್ರಮ ಅಧಿಕಾರಿ ರವಿಶಂಕರ್, ಕಾಳಗಿ ತಾಲೂಕಿನ ಸಹಾಯಕ ನಿರ್ದೇಶಕ ಗಂಗಾಧರ್, ಕಲ್ಬುರ್ಗಿಯ ಜಿಲ್ಲಾ ಸಂಯೋಜಕ ಸಿದ್ದರಾಮ್ ಕೆರೂರ್, ರಾಜಾಪುರ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಸರಡಗಿ, ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಶೇಖರ್, ಶಾಂತಕುಮಾರ್, ತಾಲೂಕಿನ ಸಹಾಯಕ ಲೆಕ್ಕಾಧಿಕಾರಿ ತಿಪ್ಪಯ್ಯ ಪತ್ತಿ, ಗಿರೀಶ್ ಕಲಶೆಟ್ಟಿ, BFT ಮಲ್ಲಿಕಾರ್ಜುನ್, ಕಾಯಕ ಬಂಧುಗಳು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಳಗಿ ತಾಲೂಕಿನ ಸಂಯೋಜಕಿ ಜ್ಯೋತಿ ಸಾಗರ ನಿರೂಪಿಸಿದರು.
ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸುಮಾರು 150 ಜನ ಕೂಲಿಕಾರರಿಗೆ ಬಿಪಿ, ಶುಗರ್, ಜ್ವರ,ಕೆಮ್ಮು ಸೇರಿದಂತೆ ನೇತ್ರ ಚಿಕಿತ್ಸೆ ಮಾಡಲಾಯಿತು. ಚಿಕಿತ್ಸೆ ಮಾಡುವುದರ ಮೂಲಕ ಜನರಿಗೆ ಕೋವಿಡ್ ನಿಯಂತ್ರಿಸುವ ಮಾರ್ಗಸೂಚಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಲಾಯಿತು.
ಡಾಕ್ಟರ ಮತ್ತು ಸಿಸ್ಟರ್ಸ್ ಹೆಸರು ಮಂಗಲಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾಕ್ಟರ್ ದೀಪಕ್ ಕುಮಾರ್ ರಾಥೋಡ್, ಸಮುದಾಯ ಆರೋಗ್ಯ ಅಧಿಕಾರಿ ಕುಮಾರಿ ಪ್ರೇಮಾ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ರೇಣುಕಾ, ವಿಜಯಲಕ್ಷ್ಮಿ, ಗೌರಿ, ರೇಷ್ಮಾ ಮುಂತಾದ ಆರೋಗ್ಯ ಅಧಿಕಾರಿಗಳು ಕೂಲಿಕಾರ್ಮಿಕರಿಗೆ ಚಿಕಿತ್ಸೆ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…