ಬಿಸಿ ಬಿಸಿ ಸುದ್ದಿ

ಜಿ.ಎಂ.ಸುಗರ್ಸ್ ಮೇಲೆ ದೂರು ಧಾಖಲು : ಎಸ್.ಆರ್.ಹಿರೇಮಠ

ದಾವಣಗೆರೆ: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ಜಿ.ಎಂ. ಶುಗರ್ಸ್ ಮತ್ತು ಎನರ್ಜಿ ಲಿಮಿಟೆಡ್ ಅನಧಿಕೃತವಾಗಿ ಕಟ್ಟಡ ಕಲ್ಲು ತೆಗೆದಿರುವ ಬಗ್ಗೆ ಹಾವೇರಿಯ ಭೂ ವಿಜ್ಞಾನ ಇಲಾಖೆಯು ಹಿರೇಕರೂರು ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿದೆ.

ಇದು ಸಮಾಜ ಪರಿವರ್ತನ ಸಮುದಾಯ ಹಾಗೂ ಸಮಾನ ಮನಸ್ಕ ಸಂಘಟನೆಗಳ ಹೋರಾಟದ ಫಲ ಎಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಎಸ್.ಆರ್. ಹಿರೇಮಠ್ ತಿಳಿಸಿದರು.

ಕಂದಾಯ, ಅರಣ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡವು ನವಂಬರ್ 8, 2021ರಂದು ಜಂಟಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ಅದರಂತೆ ಈ ಕ್ರಮ ಜರುಗಿಸಲಾಗಿದ್ದು, ಇದು ಹೋರಾಟಕ್ಕೆ ಸಂದ ಮೊದಲ ಜಯ. ಆದರೆ, ಇಲಾಖೆಯ ಅಧಿಕಾರಿಗಳು ಈ ಪ್ರಕರಣವನ್ನು ನಿಧಾನಗತಿಯಲ್ಲಿ ಕೊಂಡ್ಯೊಯುತ್ತಿದ್ದಾರೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಜಿ.ಎಂ. ಶುಗರ್ಸ್ ಕಂಪನಿ ಅನಧಿಕೃತವಾಗಿ ಗಣಿಗಾರಿಕೆಯಿಂದ ತೆಗೆದ ಖನಿಜವನ್ನು ವಿವಿಧ ನಮೂನೆ ಜಿಲ್ಲೆಯಾಗಿ ಮಾರ್ಪಡಿಸಿ ದಾಸ್ತಾನು ಮಾಡಿದ್ದನ್ನು ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆದೇಶದಂತೆ ಅಕ್ರಮ ಕಲ್ಲು ಮತ್ತು ಜಿಲ್ಲಿಯನ್ನು ಸ್ಥಳದಲ್ಲಿಯೇ ವಶಕ್ಕೆ ಪಡೆದಿದ್ದಾರೆ. ಸ್ವಾಧೀನ ಪಡೆಸಿಕೊಂಡಿರುವ 16,080 ಮೆಟ್ರಿಕ್ ಟನ್ ಜಲ್ಲಿ ಮತ್ತು 980 ಮೆಟ್ರಿಕ್ ಟನ್ ಕಟ್ಟಡ ಕಲ್ಲನ್ನು ಹರಾಜು ಮೂಲಕ ವಿಲೇವಾರಿ ಮಾಡಬೇಕು. ಕಂಪನಿಯವರು ಕಲ್ಲು ತೆಗೆಯಲು ಅನುಮತಿ ಪಡೆದಿರುವ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶದಲ್ಲಿ ಅನಧಿಕೃತವಾಗಿ ಉಪಖನಿಜ ತೆಗೆದು ಸಾಗಾಣಿಕೆ ಮಾಡಿರುವ ಪ್ರಮಾಣವನ್ನು ಡ್ರೋನ್‌ ಸಮೀಕ್ಷೆ ನಡೆಸುವ ಮೂಲಕ ಅಂದಾಜಿಸಬೇಕು. ಆ ಪ್ರಮಾಣಕ್ಕೆ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮದಂತೆ ಕಾಂಪೌಂಡಿಂಗ್ ಶುಲ್ಕ ಮತ್ತು ರಾಜಧನವನ್ನು ಸಂಗ್ರಹಿಸಬೇಕು ಎಂದು ಆಗ್ರಹಿಸಿದರು.

ಜಿ.ಎಂ. ಶುಗರ್ ಕಂಪನಿ ಮುಖ್ಯಸ್ಥರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಬಂಧಿಸಬೇಕು. ಆಗಿರುವ ನಷ್ಟಕ್ಕೆ ಪೈಸ ಪೈಸ ವಸೂಲಿ ಮಾಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಆನೀಷ್ ಪಾಷಾ, ಸಮಾಜ ಪರಿವರ್ತನ ಸಮುದಾಯದ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಸಿ. ಹಾವೇರಿ, ಆಡಳಿತ ಮಂಡಳಿ ಸದಸ್ಯ ನಾಗಪ್ಪ ಸಿ. ದೊಡ್ಡಮನಿ, ಲಂಚಮುಕ್ತ ಕರ್ನಾಟಕದ ಮಾಲತೇಶ್, ಹುಸೇನ್ ಸಾಬ್ ಹಸನ್ ಸಾಬ್ ಬಿಲ್ಲಾಳ್ಳಿ ಅವರೂ ಇದ್ದರು.

ರೈತ ವಿರೋಧಿ ಕಾಯ್ದೆ ರದ್ದು ಮಾಡಿ: ರೈತರು ಒಂದು ವರ್ಷ ಹೋರಾಟ ಮಾಡಿದ ಬಳಿಕ ಕೇಂದ್ರ ಸರ್ಕಾರವು ಮೂರು ಕರಾಳ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್‌ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಕೂಡ ಮೂರು ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಜಾರಿ ಮಾಡಿದ್ದು, ಅವುಗಳನ್ನು ಕೂಡ ವಾಪಸ್‌ ಪಡೆಯಬೇಕು ಎಂದು ಎಸ್‌.ಆರ್. ಹಿರೇಮಠ್ ಒತ್ತಾಯಿಸಿದರು.

ಭೂಸುಧಾರಣಾ ಕಾಯ್ದೆ, ಕರ್ನಾಟಕ ಗೋ ಹತ್ಯಾ ತಡೆ ಮತ್ತು ಸಂರಕ್ಷಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಜಾರಿಗೆ ತಂದಿದೆ. ಕೃಷಿ ಸೇವೆಗಳು ಹಾಗೂ ಬೆಲೆ ಭರವಸೆ ಒಪ್ಪಂದ ಕಾಯ್ದೆ, ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ಎಪಿಎಂಸಿಯಡಿ ಬರುತ್ತವೆ. ಅವೆಲ್ಲವನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕು. ಇಲ್ಲದಿದ್ದರೆ ಜನಾಂದೋಲನಗಳ ಮಹಾಮೈತ್ರಿ, ಸಿಟಿಜನ್ ಫಾರ್ ಡೆಮಾಕ್ರಸಿ ಹಾಗೂ ಸಮಾನ ಮನಸ್ಕ ಸಂಘಟನೆಗಳೊಂದಿಗೆ ರಾಜ್ಯದಾದ್ಯಂತ ಜನಾಂದೋಲನ ರೂಪಿಸಲಾಗುವುದು. ಜಾಥಾ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago