ಬಿಸಿ ಬಿಸಿ ಸುದ್ದಿ

ವಿವೇಕಾನಂದರ ವಿಚಾರಗಳು ಯುವ ಜನಾಂಗಕ್ಕೆ ಪ್ರೇರಣೆ: ಮಹೇಶ ಪಾಟೀಲ್

ಸುರಪುರ: ರಾಷ್ಟ್ರದ ಶ್ರೇಷ್ಠ ಯುವ ಸಂತ ಸ್ವಾಮಿ ವಿವೇಕಾನಂದರ ತತ್ವ, ಚಿಂತನೆ, ವಿಚಾರಗಳು ಯುವ ಜನಾಂಗಕ್ಕೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿವೆ ಎಂದು ಸುರಪುರ ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್ ಸೂಗುರ ಹೇಳಿದರು.

ನೆಹರು ಯುವ ಕೇಂದ್ರ ಕಲಬುರಗಿ, ಸಗರನಾಡು ಯುವಕ ಸಂಘ ಕನ್ನೆಳ್ಳಿ ಸಹಯೋಗದೊಂದಿಗೆ ರಂಗಂಪೇಟೆಯ ಖಾದಿ ಕೇಂದ್ರದ ಮೈದಾನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವದಿನ ಸ್ವಾಮಿ ವಿವೇಕಾನಂದರ ಜನ್ಮ ದಿನೋತ್ಸವ ನಿಮಿತ್ಯ ನಡೆದ ಯುವ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಚಿಕ್ಯಾಗೋ ಸಮ್ಮೇಳನದ ಮೂಲಕ ವಿಶ್ವದ ಗಮನ ಸೇಳೆದ ಸ್ವಾಮಿ ವಿವೇಕಾನಂದರು ಈ ರಾಷ್ಟ್ರದ ಯುವ ಜನಾಂಗಕ್ಕಾಗಿ ಅನೇಕ ವಿಚಾರಗಳನ್ನು, ಚಿಂತನೆಗಳನ್ನು, ಆಲೋಚನೆಗಳನ್ನು ತಿಳಿಸಿದ್ದಾರೆ. ಅವರ ದೇಶ ಪ್ರೇಮ, ಯುವ ಜನಾಂಗದ ಮೇಲಿನ ಅಭಿಮಾನ ರಾಷ್ಟ್ರಭಕ್ತಿ ಆದರ್ಶಪ್ರಾಯವಾಗಿತ್ತು ಇಂದಿನ ಯುವಜನಾಂಗಕ್ಕೆ ವಿವೇಕಾನಂದರ ವಿಚಾರಗಳು ಅತ್ಯಂತ ಅವಶ್ಯಕವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸನೀಡಿದ ರಂಗಂಪೇಟ ಎಂ.ಎಸ್.ಡಬ್ಲ್ಯೂ ಕಾಲೇಜಿನ ಪ್ರಾಚಾರ್ಯ ಡಾ|| ಮಲ್ಲಿಕಾರ್ಜುನ ಕುಲಕರ್ಣಿ ಮಾತನಾಡಿ, ಬಾಲ್ಯದಲ್ಲಿದ್ದ ನರೇಂದ್ರ ರಾಮಕೃಷ್ಣ ಪರಮಹಂಸರ ಪ್ರೇರಣೆಯಿಂದ ಸ್ವಾಮಿ ವಿವೇಕಾನಂದ ಆದರು, ಅಮೇರಿಕಾದ ಚಿಕ್ಯಾಗೋ ಸಮ್ಮೇಳನದ ಮೂಲಕ ವಿಶ್ವದ ಗಮನಸೇಳೆದು ಭಾರತದ ಭವ್ಯತೆ, ಪರಂಪರೆ, ಜಾಗತಿಕಮಟ್ಟದಲ್ಲಿ ಪರಿಚಯಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಬಸವೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ವಿರೇಶ ಹಳಿಮನಿ, ಶಾಂತು ನಾಯಕ, ಕರ್ನಾಟಕ ನವನಿರ್ಮಾಣ ವೇದಿಕೆಯ ಅಧ್ಯಕ್ಷ ಶಿವರಾಜ ಕಲಿಕೇರಿ, ಶ್ರೀಗುರು ಸಂಸ್ಥೆಯ ಅಧ್ಯಕ್ಷ ಮಲ್ಲು ಬಾದ್ಯಾಪುರ ವೇದಿಕೆ ಮೇಲಿದ್ದರು, ಯುವಕ ಸಂಘದ ಅದ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಪೋಲಿಸ್ ಸಿಬ್ಬಂದಿ ದಯಾನಂದ ಜಮಾದಾರ್, ಸುರಪುರ ನಗರಸಭೆಯ ಆರೋಗ್ಯ ನಿರಿಕ್ಷಕ ಗುರುಸ್ವಾಮಿ ದೇವದುರ್ಗ, ಸಮಾಜ ಸೇವಕ ಮಲ್ಲು ಸುಬೇದಾರ ಇವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲಿ ಯುವಕರಿಗಾಗಿ ವಾಲಿಬಾಲ್, ಕಬ್ಬಡ್ಡಿ ಮತ್ತು ವಿದ್ಯಾರ್ಥಿನಿಯರಿಗಾಗಿ ಕುರ್ಚಿ ಆಟ ಸ್ಪರ್ದೆ ನಡೆಯಿತು. ಭಾಗವಹಿಸಿದ ವಿದ್ಯಾರ್ಥಿಗಳೀಗೆ ಪ್ರಮಾಣ ಪತ್ರ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನು ಸಲಿಂ ಪಾಶಾ ನಿರೂಪಿಸಿದರು, ಶ್ರೀಕಾಂತ ರತ್ತಾಳ ಪ್ರಾರ್ಥಿಸಿದರು, ಪ್ರವೀಣ ಜಕಾತಿ ಸ್ವಾಗತಿಸಿದರು, ದೇವರಾಜ ನಂದಗಿರಿ ವಂದಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago