ಬಿಸಿ ಬಿಸಿ ಸುದ್ದಿ

ಸುರಪುರ:ಅಕ್ಷರ ದಾಸೋಹ ನೌಕರರ ಬೇಡಿಕೆಗಳಿಗಾಗಿ ಪ್ರತಿಭಟನೆ

ಸುರಪುರ: ರಾಜ್ಯದಲ್ಲಿನ ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಘಟಕದಿಂದ ನಗರದ ತಹಸೀಲ್ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಪತ್ತಾರ ಮಾತನಾಡಿ, ಮಧ್ಯಾಹ್ನದ ಉಪಹಾರ ಯೋಜನೆ ಅಡಿಯಲ್ಲಿ ಕಳೆದ 19 ವರ್ಷಗಳಿಂದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳಲ್ಲಿ ಬಿಸಿಯೂಟ ತಯಾರಕರಾಗಿ ನೌಕರರು ಕೆಲಸ ಮಾಡುತ್ತಿದ್ದಾರೆ. ಪ್ರತಿ ದಿನ 6 ಗಂಟೆ ಕೆಲಸ ಮಾಡುತ್ತಿರುವ ನೌಕರರಿಗೆ ಯಾವುದೇ ಉದ್ಯೋಗ ಭದ್ರತೆಯಿಲ್ಲ.ನಿವೃತ್ತಿ ವೇತನ, ವೈದ್ಯಕೀಯ, ಭವಿಷ್ಯ ನಿಧಿ, ಅಪಘಾತ ಪರಿಹಾರವಿಲ್ಲದೆ ಅತ್ಯಂತ ಕನಿಷ್ಠ ಗೌರವಧನಕ್ಕೆ ದುಡಿಯುತ್ತಿದ್ದಾರೆ.

ಮುಖ್ಯ ಅಡುಗೆಯವರಿಗೆ ರೂ.2700/ ಹಾಗೂ ಸಹಾಯಕಿಯರಿಗೆ ರೂ.2600 ಮಾಸಿಕ ಸಂಭಾವನೆ ನೀಡಲಾಗುತ್ತಿದೆ. ಗಗನಕ್ಕೆರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ದುಸ್ತರವಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಹಾಗೂ ಕನಿಷ್ಠ ಕೂಲಿಗಾಗಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಡೆಸಿದ ರಾಷ್ಟ್ರೀಯ ಮುಷ್ಕರಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿರುವುದಿಲ್ಲ.

ಆದುದರಿಂದ ಬಿಸಿಯೂಟ ತಯಾರಕರಿಗೆ ಕೇಂದ್ರ ಸರ್ಕಾರ 2021-22 ರೈ ಮುಂಗಡ ಪತ್ರದಲ್ಲಿ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಸನ್ಮಾನ ಪ್ರಧಾನ ಮಂತ್ರಿಗಳು ನರೇಂದ್ರ ಮೋದಿಯವರಿಗೆ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸುರಪುರ ತಾಲೂಕು ಸಮಿತಿ ಆಗ್ರಹಿಸುತ್ತಿದೆ ಎಂದರು.

ನಂತರ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಸಿಯೂಟ ತಯಾರಕ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕಾಂ. ಕಲ್ಪನಾ ಗುರುಸಣಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ. ಶ್ರೀ ದೇವಿ ಕೂಡ್ಲಿಗಿ, ಜಿಲ್ಲಾ ಖಜಾಂಚಿ ಬಸ್ಸಮ್ಮ ತಡಿಬಿಡಿ, ಜಿಲ್ಲಾ ಗೌರವಾಧ್ಯಕ್ಷ ದೇವೆಂದ್ರಪ್ಪ ಪತ್ತಾರ, ಯಮುನಾ ಕಕ್ಕೇರಿ,ಲಕ್ಷ್ಮೀ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

2 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

15 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

16 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

17 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

17 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

17 hours ago