ಅಕ್ರಮ ಮದ್ಯ ಮಾರಾಟ ನಿಷೇಧಿಸಿ

0
14

ಕಲಬುರಗಿ : ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಪ್ರತಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಡಾ. ಮಲ್ಲಿಕಾರ್ಜುನ ಎಸ್.ನಾಯಕೋಡಿ ಒತ್ತಾಯಿಸಿದ್ದಾರೆ.

ಈ ತಾಲೂಕುಗಳಲ್ಲಿ ಪ್ರತಿ ಹಳ್ಳಿಗಳಲ್ಲಿ ಕಿರಾಣಿ ಅಂಗಡಿ, ಪಾನ್‌ಶಾಪ್, ಹೋಟೆಲ್, ಖಾನಾವಳಿಗಳಲ್ಲಿ ಅಲ್ಲದೆ ಗ್ಯಾರೇಜ್‌ಗಲ್ಲಿಯು ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ.

Contact Your\'s Advertisement; 9902492681

ಇದರಿಂದ ರೈತ ಮತ್ತು ಕೂಲಿ ಕಾರ್ಮಿಕರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಮಕ್ಕಳಿಂದ ಹಿಡಿದು ವಯೋ ವೃದ್ಧರವರೆಗೆ ತೊಂದರೆ ಇಲ್ಲದೆ ಎಲ್ಲಿ ಬೇಕಲ್ಲಿ ಮದ್ಯದ ಬಾಟಲಿಗಳು ಸಿಗುತ್ತಿವೆ. ಆದ್ದರಿಂದ ಒಂದು ವಾರದೊಳಗೆ ಮದ್ಯ ಅಕ್ರಮ ಮಾರಾಟ ತಡೆಯಬೇಕು . ಇಲ್ಲದಿದ್ದರೆ ಸಂಘಟನೆಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಅಬಕಾರಿ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ಎಚ್ಚರಿಸಲಾಗಿದೆ .

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here