ಮಲ್ಲಿಕಾರ್ಜುನ ಖರ್ಗೆ ಕೋವಿಡ್ ಪಾಸಿಟಿವ್

0
140
kharge

ಕಲಬುರಗಿ: ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಈ ಕುರಿತು ಅವರ ಕಾರ್ಯದರ್ಶಿ ಹೇಳಿಕೆ ನೀಡಿದ್ದಾರೆ.

ಬುಧವಾರ ನಡೆಸಿದ ಆರ್ ಟಿ ಪಿಸಿಆರ್ ಟೆಸ್ಟ್ ನಲ್ಲಿ ಕೊರೋನಾ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಪ್ರಸ್ತುತ ಖರ್ಗೆಯವರು ಹೋಮ್ ಐಸೋಲೇಷನ್ ನಲ್ಲಿ ಇದ್ದಾರೆ. ಅವರು ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿದ್ದು, ಎರಡನೆಯ ಡೋಸ್ ಪಡೆದ ನಂತರ 9 ತಿಂಗಳು ಅವಧಿ ಪೂರ್ಣಗೊಳಿಸಬೇಕಾಗಿರುವುದರಿಂದ ಅವರು ಇನ್ನೂ ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿಲ್ಲ.

Contact Your\'s Advertisement; 9902492681

ದೆಹಲಿ ಕಚೇರಿಯ ಐವರು ಸಿಬ್ಬಂದಿ ಸೇರಿದಂತೆ ಕಾರ್ಯದರ್ಶಿಗಳಿಗೆ ಕೂಡಾ ಕೊರೋನಾ ಪಾಸಿಟಿವ್ ಆಗಿದ್ದು ಅವರೆಲ್ಲ ಹೋಮ್ ಐಸೋಲೇಷನ್‌ನಲ್ಲಿದ್ದು ಸುಧಾರಿಸಿಕೊಳ್ಳುತ್ತಿದ್ದಾರೆ.

ಹಿರಿಯ ನಾಗರಿಕರು ಸೇರಿದಂತೆ ಅರ್ಹರಿರುವ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ಅವರು ಮನವಿ ಮಾಡಿರುವುದಾಗಿ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಕಳೆದೆರಡು ದಿನಗಳಿಂದ ಖರ್ಗೆ ಅವರೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಆರ್ ಟಿಪಿಸಿ ಆರ್ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here