ಬಿಸಿ ಬಿಸಿ ಸುದ್ದಿ

ಆಳಂದನಲ್ಲಿ ವೀರಶೈವ ವಿದ್ಯಾರ್ಥಿ ವಸತಿ ನಿಲಯ ಸ್ಥಾಪನೆಗೆ ಪರಿಶೀಲನೆ

ಆಳಂದ: ಪಟ್ಟಣದ ಹೊರವಲಯದ ಉಮರಗಾ ಹೆದ್ದಾರಿಯಲ್ಲಿನ ನಿವೇಶನದಲ್ಲಿ ಕಲಬುರಗಿ ಜಿಲ್ಲಾ ವೀರಶೈವ ಸಮಾಜದ ಆಶ್ರಯದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಸಮಾಜದ ಜಿಲ್ಲಾಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲಹಂಗರಗಾ ಅವರ ನೇತೃತ್ವದಲ್ಲಿ ಮುಖಂಡರು ಸ್ಥಳ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅರುಣಕುಮಾರ ಪಾಟೀಲ ಅವರು, ಸಮಾಜದಲ್ಲಿ ಕಡುಬಡವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬಹುದಿನಗಳ ಬೇಡಿಕೆಯಾದ ವಿದ್ಯಾರ್ಥಿ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿ ಈ ನಿಟ್ಟಿನಲ್ಲಿ ಸ್ಥಳವನ್ನು ಪರಿಶೀಲಿಸಲಾಗಿದೆ. ಈ ನಿಟ್ಟಿನಲ್ಲಿ ಸಮಾಜ ಬಾಂಧವರನ್ನು ಹಾಗೂ ಇನ್ನೂಳಿದ ಎಲ್ಲರನ್ನು ವಿಶ್ವಾಸಕ್ಕೆ ತೆರೆದುಕೊಂಡು ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ವೀರಶೈವ ಸಮಾಜದ ವಿದ್ಯಾರ್ಥಿಗಳಿಗೆ ಪಟ್ಟಣ ಸೇರಿ ತಾಲೂಕಿನ ಯಾವಕಡೆಯು ವಸತಿ ನಿಲಯಗಳಿಲ್ಲ. ಇದರಿಂದಾಗಿ ಅನಾನುಕೂಲವಾಗಿ ಮಕ್ಕಳು ಜಿಲ್ಲಾ ವೀರಶೈವ ವಸತಿನಿಲಯಕ್ಕೆ ಹೆಚ್ಚಿನವರು ಬರುತ್ತಿದ್ದಾರೆ. ಆದರೂ ದೂರದ ಊರಿಗೆ ಬಂದು ವಿದ್ಯೆ ಕಲಿಯುವುದು ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಆಳಂದ ಪಟ್ಟಣದಲ್ಲೆ ವಸತಿ ನಿಲಯ ಕಟ್ಟಡವನ್ನು ಕಟ್ಟಿ ಅವರಿಗೆ ಅನುಕೂಲ ಮಾಡುವ ಉದ್ದೇಶದಿಂದ ಪ್ರಥಮಬಾರಿಗೆ ಈ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ವೀರಶೈವ ಸಮಾಜದ ಹಿರಿಯ ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ್, ಪುರಸಭೆ ಉಪಾಧ್ಯಕ್ಷ ಈರಣ್ಣಾ ಹತ್ತರಕಿ, ಹಿರಿಯ ಸಿದ್ಧರಾಮ ಪಾಟೀಲ ದಣ್ಣೂರ, ಚಂದ್ರಕಾತ ನಿಂಗದಳ್ಳಿ ಮತ್ತಿತರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago