ಬಿಸಿ ಬಿಸಿ ಸುದ್ದಿ

ಸ್ಲಂ ಬೋರ್ಡ್ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಯುವ ಕರವೇ ಮನವಿ

ಸುರಪುರ: ನಗರದಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿ ವರ್ಷಗಳಾದರು ಪೂರ್ಣಗೊಳಿಸದೆ ಕಡೆಗಣಿಸಲಾಗಿದೆ.ಆದ್ದರಿಂದ ಕೂಡಲೇ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ಯುವ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ನಗರದ ತಹಸೀಲ್ ಕಚೇರಿ ಮುಂದೆ ಗುರುವಾರ ಮದ್ಹ್ಯಾನ ಸಾಂಕೇತಿಕ ಪ್ರತಿಭಟನೆ ನಡೆಸಿದ ಮುಖಂಡರು ಮಾತನಾಡಿ,ನಗರದಲ್ಲಿನ ಸ್ಲಂ ಬೋರ್ಡ್‌ನಿಂದ ಬಡವರಿಗೆ ಮನೆಗಳು ಮಂಜೂರಾಗಿ ನಿರ್ಮಿಸುತ್ತಿದ್ದಾರೆ.ಅಲ್ಲದೆ ಪ್ರತಿ ಫಲಾನುಭವಿಯಿಂದ ೨೫ ಸಾವಿರ ರೂಪಾಯಿಗಳಂತೆ ಮೂರು ಕಂತಿನ ೭೫ ಸಾವಿರ ರೂಪಾಯಿಗಳನ್ನು ಕಟ್ಟಿಸಿಕೊಳ್ಳಲಾಗಿದೆ.ಆದರೆ ಹಣ ಕಟ್ಟಿದ ಫಲಾನುಭವಿಗಳಿಗೆ ಇದುವರೆಗೂ ಮನೆಗಳನ್ನು ನಿರ್ಮಿಸಿ ಕೊಟ್ಟಿಲ್ಲ.ಅಲ್ಲದೆ ಮನೆಗಳ ನಿರ್ಮಾಣಕ್ಕೆ ಬಳಸಿರುವ ಕಚ್ಚಾ ವಸುಗಳು ಕಳಪೆ ಗುಣಮಟ್ಟದವುಗಳಾಗಿವೆ ಎಂದು ಆರೋಪಿಸಿದರು.

ಆದ್ದರಿಂದ ಕೂಡಲೇ ಮನೆಗಳ ನಿರ್ಮಾಣದಲ್ಲಿ ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು,ಈ ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸಿದಲ್ಲಿ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ತಹಸೀಲ್ದಾರರಿಗೆ ಬರೆದ ಮನವಿಯನ್ನು ಸಿರಸ್ತೆದಾರರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಗೌರವಾಧ್ಯಕ್ಷ ರಾಜಾ ಚೆನ್ನಪ್ಪ ನಾಯಕ,ಉಪಾಧ್ಯಕ್ಷ ಸಚಿನ್ ಕುಮಾರ ನಾಯಕ,ಖಜಾಂಚಿ ಮಂಜುನಾಥ,ಕಾರ್ಯದರ್ಶಿ ಮಹ್ಮದ ರಫೀಕ್ ಮುಖಂಡರಾದ ಅಬೀದ್ ಹುಸೇನ್ ಪಗಡಿ,ಅಮಜದ್ ಹುಸೇನ ಸೇರಿದಂತೆ ಅನೇಕರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago