ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ಮನಗೆದ್ದ ಗರುಡ ಗಮನ ವೃಷಭ ವಾಹನ ಸಿನಿಮಾ ಜೀ5ನಲ್ಲಿ ಇಂದಿನಿಂದ ಸ್ಟ್ರೀಮ್ ಆಗಲಿದೆ. ಕಳೆದ ನವೆಂಬರ್ 19ರಂದು ಥಿಯೇಟರ್ ಗೆ ಲಗ್ಗೆ ಇಟ್ಟ ‘ಗರುಡ ಗಮನ ವೃಷಭ ವಾಹನ’ ಸಿನಿಮಾವು ನೋಡುಗರಿಂದ ಸಖತ್ ಮೆಚ್ಚುಗೆ ಪಡೆದುಕೊಂಡಿತ್ತು. ‘ಒಂದು ಮೊಟ್ಟೆಯ ಕಥೆ’ ಥರದ ಕಾಮಿಡಿ ಸಿನಿಮಾ ಮಾಡಿದ್ದ ರಾಜ್ ಬಿ. ಶೆಟ್ಟಿ, ಇಂಥದ್ದೊಂದು ಗ್ಯಾಂಗ್‌ಸ್ಟರ್ ಸಿನಿಮಾ ಮಾಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅದರಲ್ಲೂ ಅವರು ಮಾಡಿದ್ದ ಶಿವ ಪಾತ್ರ ಸಖತ್ ರಗಡ್ ಆಗಿ ಮೂಡಿಬಂದಿತ್ತು. ರಾಜ್ ಬಿ. ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಕಾಂಬಿನೇಷನ್ ನೋಡುಗರಿಗೆ ಇಷ್ಟವಾಗಿತ್ತು. ಇದೀಗ ಈ ಸಿನಿಮಾವನ್ನು ಟಾಲಿವುಡ್ ಖ್ಯಾತ ನಿರ್ಮಾಪಕ ದೇವ ಕಟ್ಟ ಮೆಚ್ಚುಕೊಂಡಿದ್ದಾರೆ.
ಆಸ್ಕರ್ ಅವಾರ್ಡ್ ವಿನ್ನಿಂಗ್ ಮೂವೀ ಎಂದ ದೇವ: ಟಾಲಿವುಡ್ ಸೇರಿದಂತೆ ಬಾಲಿವುಡ್ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿ ಸಕ್ಸಸ್ ಕಂಡಿರುವ ದೇವ ಕಟ್ಟಾ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ.
2021ರ ಭಾರತೀಯ ಸಿನಿಮಾಗಳ ಪೈಕಿ ಅತ್ಯುತ್ತಮ ಚಲನಚಿತ್ರ ಗರಡುಗಮನ ವೃಷಭ ವಾಹನ. ನನಗೆ ಆಸ್ಕರ್ ಗೆ ಸಿನಿಮಾ ಆಯ್ಕೆ ಮಾಡುವ ಪವರ್ ಇದ್ದಿದ್ದರೇ ಈ ಸಿನಿಮಾವನ್ನು ಆಯ್ಕೆ ಮಾಡುತ್ತಿದ್ದೆ. ಗರಡು ಗಮನ ವೃಷಭ ವಾಹನ ಸಿನಿಮಾವನ್ನು ನನ್ನ ಸ್ನೇಹಿತರ ಜೊತೆ ನೋಡಿದೆ. ಫಿಲ್ಮಂ ಮೇಕಿಂಗ್ ಅದ್ಭುತವಾಗಿದೆ. ಸಿನಿಮಾ ಬಹಳಷ್ಟು ಇಷ್ಟದ ನಂತರ ಮತ್ತೆ ಕೆಲ ದಿನ ಬಳಿಕ ಥಿಯೇಟರ್ ಗೆ ಹೋದಾಗ ಸಿನಿಮಾ ಇರಲಿಲ್ಲ. ಹೀಗಾಗಿ ಬೇಸರ ಆಯ್ತು. ಈಗ ಜೀ5 ಫ್ಲಾಟ್ ಫಾರ್ಮ್ ನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ರಾಜ್ ಬಿ ಶೆಟ್ಟಿ ಸಿನಿಮಾವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಪ್ರತಿಯೊಬ್ಬರಿಗೆ ಇಷ್ಟು ಆಗುತ್ತೆ ಮಿಸ್ ಮಾಡದ್ದೇ ಎಲ್ಲರೂ ನೋಡಿ ಎಂದಿದ್ದಾರೆ ದೇವ್.
ಸದ್ಯ ಜೀ5ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟಿಸಿದ್ದ ‘ಭಜರಂಗಿ 2’ ಒಳ್ಳೆಯ ಪ್ರಶಂಸೆ ಪಡೆದುಕೊಂಡಿದೆ. ಹಾಗೆಯೇ, ರವಿಚಂದ್ರನ್ ‘ಕನ್ನಡಿಗ’ ಕೂಡ ಸೌಂಡು ಮಾಡಿದೆ. ಈಗ ‘ಗರುಡ ಗಮನ ವೃಷಭ ವಾಹನ’ ಸಿನಿಮಾವೂ ಜೀ5 ಸೇರಿಕೊಂಡಿದ್ದು, ಪ್ರತಿ ಪ್ರೇಕ್ಷಕ ಮನೆ ಮನ ತಲುಪಲಿದೆ. ಹಾಗಿದ್ರೆ ಮತ್ಯಾಕೆ ತಡ ಜೀ5 ಆ್ಯಪ್ ಡೌನ್ ಲೋಡ್ ಮಾಡಿಕೊಂಡು ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…