ಮಾಲೂರು: ವಿದ್ಯಾರ್ಥಿಗಳು ಶಾಲೆಗೆ ತಪ್ಪಿಸಿಕೊಳ್ಳದೆ ನಿತ್ಯವು ಬರಬೇಕು, ನಿರಂತರವಾಗಿ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಜಯಕರ್ನಾಟಕ ಸಂಘಟನೆಯ ವಿದ್ಯಾರ್ಥಿ ಘಟಕದ ಅಧ್ಯಕ್ಷ ಶಶಿಕೀರ್ತಿ ತಿಳಿಸಿದರು.
ಜಿ.ಇ.ರಾಮೇಗೌಡ ಚಾರಿಟೇಬಲ್ ಟ್ರಸ್ಟ್, ಮಾಲೂರು ವತಿಯಿಂದ ತೊರ‍್ನಹಳ್ಳಿ ಗ್ರಾಮದ ರಮಾ ಮಾಧವ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲ್ಲೂಕಿನ ಪ್ರತಿಯೊಂದು ಹಳ್ಳಿಗೂ ರಾಮೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬ್ಯಾಗ್ ಮತ್ತು ನೋಟ್ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಿರುವ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಜೀವನವು ಮರೆಯಲಾಗದ ಘಟ್ಟವಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರು ನೀಡುವ ಮನೆಗೆಲಸವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿ ಉತ್ತಮ ವಿದ್ಯಾರ್ಥಿಗಳು ಎನಿಸಿಕೊಳ್ಳಬೇಕು ಎಂದು ರವಿ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಭಾರ ಮುಖ್ಯಶಿಕ್ಷಕಿ ಪಿ.ಜಿ.ವಿದ್ಯಾಧರಿ, ಸಹಶಿಕ್ಷಕರಾದ ಶಿಎಚ್. ಕೃಷ್ಣಮೂರ್ತಿ, ಎಲ್. ವಿದ್ಯಾವತಿ, ಎಂ ನಂಜುಂಡಪ್ಪ, ಜಿ.ಸಿ.ವೆಂಕಟಸ್ವಾಮಿ, ಎಂ.ಬಿ.ರಾಜಶೇಖರ್, ತಿಮ್ಮರಾಯಪ್ಪ, ಶಶಿಕೀರ್ತಿ, ರವಿ, ಯುಗಂಧರ್,ರಾಜ, ವೆಂಕಿ ಹಾಗೂ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…