ಬೆಂಗಳೂರು: ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೂರನೇ ಡೋಸ್ ( ಬೂಸ್ಟರ್ ) ವ್ಯಾಕ್ಸಿನ್ ತೆಗೆದುಕೊಂಡರು.
ನಂತರ ಮಾತನಾಡಿದ ಅವರು, ಕೊರೋನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳು ಅಗತ್ಯವಾಗಿ ಬೂಸ್ಟರ್ ಡೋಸ್ ಪಡೆಯುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.