ಧಾರವಾಡ/ತುಮಕೂರು: ಹಿರಿಯ ಕವಿ ನಾಡೋಜ ಚನ್ನವೀರ ಕಣವಿ ಹಾಗೂ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿ.ಬಿ.ಜಯಚಂದ್ರ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ಕಣವಿ, ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ಹೋಗಿದ್ದರು.
ಈ ವೇಳೆ ಕೊರೊನಾ ಟೆಸ್ಟ್ ಮಾಡಿದಾಗ ವರದಿ ಪಾಸಿಟಿವ್ ಬಂದಿದೆ. ಸದ್ಯ ಚನ್ನವೀರ ಕಣವಿ ಅವರು ಧಾರವಾಡ ಎಸ್ ಡಿ.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಯಚಂದ್ರಗೂ ಕೊರೋನಾ: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ಟಿ.ಬಿ.ಜಯಚಂದ್ರ ಅವರಿಗೂ ಕೊರೋನಾ ಸೋಂಕು ತಗುಲಿದ್ದು, ಅವರ ಸಂಪರ್ಕಕ್ಕೆ ಬಂದವರಿಗೆ ಆತಂಕ ಶುರುವಾಗಿದೆ. ಇನ್ನು ಎರಡನೇ ಅಲೆ ವೇಳೆಯೂ ಜಯಚಂದ್ರ ಅವರಿಗೆ ಕೊರೋನಾ ವಕ್ಕರಿಸಿತ್ತು. ಇದೀಗ ಎರಡನೇ ಬಾರಿಗೆ ಸೋಂಕು ತಗುಲಿದೆ.
ಒಂದೇ ದಿನ 23 ಜನ ವಿದ್ಯಾರ್ಥಿಗಳಿಗೆ ಕೊರೋನಾ: ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಾ ಸ್ಪೋಟವಾಗಿದೆ. ಒಂದೇ ದಿನ 23 ಜನ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು, ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಟೆಸ್ಟಿಂಗ್ ನಡೆಯುತ್ತಿರೋ ಬೆನ್ನಲ್ಲೇ ಒಂದೇ ದಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಬಾಗಲಕೋಟೆ ನಗರದ ಒಂದೇ ಶಾಲೆಯಲ್ಲಿ 12 ವಿದ್ಯಾರ್ಥಿಗಳಿಗೆ ಕೊರೋನಾ ತಗುಲಿದೆ ಎಂದು ಬಾಗಲಕೋಟೆ ಡಿ.ಎಚ್.ಓ ಡಾ.ಅನಂತ.ದೇಸಾಯಿ ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕು ಕಂಡು ಬಂದ ಶಾಲಾ ವಿದ್ಯಾರ್ಥಿಗಳಿಗೆ ಹೋಮ್ ಐಸೋಲೇಶನ್ ಮಾಡಲಾಗಿದ್ದು, ಶಾಲೆಗಳಿಗೆ ರಜೆ ನೀಡುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇಂದು(ಜ.14) ರಾಜ್ಯದಲ್ಲಿ 28,723 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು,14 ಮಂದಿ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಸಾವನ್ನಪ್ಪಿರುವ 14 ಮಂದಿಯಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ಪಾಸಿಟಿವಿಟಿ ರೇಟ್ ಶೇ.12.98ಕ್ಕೆ ಏರಿಕೆಯಾಗಿದೆ. ಇನ್ನೂ 3,105 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…