ಕಲಬುರಗಿ: ನಗರದ ಆದರ್ಶನಗರದ ಕೆ೨ ಗ್ರಂಥಾಲಯದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿಯನ್ನು `ಮಗುವಿಗೊಂದು ಮನೆಯಲ್ಲಿಯೇ ಗ್ರಂಥಾಲಯ ಹಾಗೂ ಕಾಲೋನಿಯ ಸ್ವಚ್ಛತಾ ಕಾರ್ಮಿಕರಿಗೆ ಅಭಿನಂದನಾ ಕಾರ್ಯಕ್ರಮ’ ನಡೆಸುವ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಕಾರ್ಯದರ್ಶಿ ಸೋಮಶೇಖರ ಹಿರೇಮಠ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಯೊಬ್ಬರೂ ಓದುವ ಹವ್ಯಾಸ ಹೆಚ್ಚಿಸಿಕೊಳ್ಳಬೇಕೆಂಬ ಹಿನ್ನಲೆಯಲ್ಲಿ, ಬಡಾವಣೆಯ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಸಂಯೋಜಕರಾದ ಕೃಷ್ಣ ಶಿವಮೂರ್ತಿ ಅವರ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲಬುರಗಿ, ಯಾದಗಿರಿ, ಬೀದರ ಕೆ.ಎಂ.ಎಫ್ ನಿರ್ದೇಶಕ ಸಂತೋಷ ಗುತ್ತೇದಾರ್ ಮಾತನಾಡಿ, ಮೊಬೈಲ್‌ನ ಹಾವಳಿಯಿಂದ ಇತ್ತಿಚೆಗೆ ಎಲ್ಲಾ ವಯೋಮಾನದವರು ಓದುವುದನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ಮನೆಯಲ್ಲೂ ಒಂದು ಪುಟ್ಟ ಗ್ರಂಥಾಲಯ ಸ್ಥಾಪನೆ ಮಾಡುವುದರಿಂದ ಪುಸ್ತಕಗಳನ್ನು ಸಂಗ್ರಹಿಸಬೇಕು, ಅವುಗಳನ್ನು ಓದಬೇಕು ಎಂಬ ಭಾವನೆ ಬರುತ್ತದೆ ಎಂಬ ಹಿನ್ನಲೆಯಲ್ಲಿ ಹಮ್ಮಿಕೊಂಡಿರುವ ಇಂತಹ ಜಾಗೃತಿ ಕಾರ್ಯಗಳು ಹೆಚ್ಚು ಹೆಚ್ಚಾಗಿ ನಡೆಯಬೇಕೆಂದರು.
ಕಾರ್ಯಕ್ರಮದ ಸಂಯೋಜಕ ಕೃಷ್ಣ ಶಿವಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಮಿ ವಿವೇಕಾನಂದರ ಕನಸಿನ ಭಾರತ ನಿರ್ಮಾಣ ಯುವಕರ ಕೈಯಲ್ಲಿದೆ. ಅವರಿಗೆ ಪಾಲಕರು ಪ್ರೋತ್ಸಾಹಿಸಬೇಕು. ರಾಷ್ಟç ಪ್ರೇಮ, ಆತ್ಮವಿಶ್ವಾಸ ತುಂಬುವ ಮೂಲಕ ಅವರನ್ನು ಮುನ್ನಡೆಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗಣ್ಯರಾದ ಮಂಜುನಾಥ ಕಳಸ್ಕರ್, ಬಸವರಾಜ ಬೂಸನೂರು ಆಗಮಿಸಿದ್ದರು. ವಿದ್ಯಾರ್ಥಿಗಳಾದ ಭಾಗವಂತಿ, ಭಾಗ್ಯಶ್ರೀ, ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸಂಜನಾ ರಂಗದಾಳ ವಂದಿಸಿದರು. ಇದೇ ಸಂದರ್ಭದಲ್ಲಿ ಕಾಲೋನಿಯ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…