ಸಿನಿಮಾ

ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ದಾಖಲೆ

2021ರಲ್ಲಿ ಪ್ರೇಕ್ಷಕರ ಮನಗೆದ್ದ ಸಿನಿಮಾಗಳ ಪೈಕಿ ‘ಗರುಡ ಗಮನ ವೃಷಭ ವಾಹನ’ ವಾಹನ ಚಿತ್ರ ಕೂಡ ಪ್ರಮುಖವಾಗಿದೆ. ರಾಜ್​ ಬಿ. ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರೌಡಿಸಂ ಲೋಕದ ಕಥೆ ಹೇಳಲಾಗಿದೆ. ನಿರ್ದೇಶನದ ಜತೆಗೆ ಪ್ರಮುಖ ಪಾತ್ರದಲ್ಲೂ ರಾಜ್​ ಬಿ. ಶೆಟ್ಟಿ ನಟಿಸಿದ್ದಾರೆ. ಇನ್ನೊಂದು ಮುಖ್ಯ ಪಾತ್ರಕ್ಕೆ ರಿಷಬ್​ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಈ ಸಿನಿಮಾ ಕನ್ನಡ ಚಿತ್ರರಂಗದಲ್ಲೇ ಬೇರೆಯದ್ದೇ ಫೀಲ್​ ಕೊಟ್ಟಿತ್ತು. ಈ ಹಿಂದೆ ನೋಡಿರದ ರೀತಿಯಲ್ಲಿ ಈ ಸಿನಿಮಾ ಮಜಾ ಕೊಟ್ಟಿತ್ತು. ಒಳ್ಳೆ ಛಾಯಾಗ್ರಹಣ, ಅದ್ಭುತ ಹಿನ್ನೆಲೆ ಸಂಗೀತ, ಕಲಾವಿದರ ಅಭಿನಯ ಎಲ್ಲವೂ ಸಖತ್​ ಕಿಕ್​ ಕೊಟ್ಟಿತ್ತು.

ಕಳೆದ ನ.19ರಂದು ಚಿತ್ರಮಂದಿರಗಳಲ್ಲಿ ತೆರೆಕಂಡಿದ್ದ ವಿಭಿನ್ನ ಕಥಾಹಂದರ ಹೊಂದಿದ್ದ ‘ಗರುಡ ಗಮನ ವೃಷಭ ವಾಹನ’ ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

‘ಹರಿ’ ಪಾತ್ರದಲ್ಲಿ ನಟ ರಿಷಬ್‌ ಶೆಟ್ಟಿ, ‘ಶಿವ’ ಎಂಬ ಪಾತ್ರದಲ್ಲಿ ರಾಜ್‌ ಪ್ರೇಕ್ಷಕರನ್ನು ಕರಾವಳಿಯ ರೌಡಿಸಂ ಲೋಕಕ್ಕೆ ಕರೆದೊಯ್ದಿದ್ದ ಈ ಸಿನಿಮಾ ಸಂಕ್ರಾಂತಿ ಹಬ್ಬಕ್ಕೆ ಜೀ5ನಲ್ಲಿ ಚಿತ್ರ ಬಿಡುಗಡೆಯಾಗಿತ್ತು.

ಜನವರಿ 13ರಂದು ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ರಿಲೀಸ್​ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾ ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷ ವೀಕ್ಷಣೆ ಕಂಡಿದೆ.

ಕ್ರೇಜಿಸ್ಟಾರ್‌ ರವಿಚಂದ್ರ ವಿ. ನಟನೆಯ ‘ಕನ್ನಡಿಗ’, ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ನಟನೆಯ ‘ಭಜರಂಗಿ–2’ ಸಿನಿಮಾ, ಸಂಚಾರಿ ವಿಜಯ್ ನಟನೆಯ ಪುಕ್ಸಟ್ಟೆ ಲೈಫ್ ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದ್ದು, ಈ ಲಿಸ್ಟ್ ಗೆ ಈಗ ‘ಗರುಡ ಗಮನ ವೃಷಭ ವಾಹನ’ ಸೇರ್ಪಡೆಯಾಗಿದೆ.

emedialine Desk

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

25 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

26 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

28 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago