ಬೆಳೆಗಳಿಗೆ ವೈಜ್ಞಾನಿಕವಾಗಿ ನೀರು ನಿರ್ವಹಣೆಗೆ ಕಾಡಾ ಅಧ್ಯಕ್ಷರಿಂದ ಸಲಹೆ

0
7

ನೇಸರಗಿ: ‘ಬೆಳೆಗಳಲ್ಲಿ ನೀರು ನಿರ್ವಹಣೆಯನ್ನು ವೈಜ್ಞಾನಿಕವಾಗಿ ಮಾಡುವುದು ಅವಶ್ಯವಾಗಿದೆ’ ಎಂದು ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಹೇಳಿದರು.

ಸಮೀಪದ ಮತ್ತಿಕೊಪ್ಪದ ಕೆಎಲ್‌ಇ ಸಂಸ್ಥೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಸಹಯೋಗದಲ್ಲಿ ಈಚೆಗೆ ನಡೆದ ‘ವಿದ್ಯುತ್ ದಕ್ಷತಾ ಪಂಪ್‌ಸೆಟ್‌ಗಳು, ಮಣ್ಣು ಮತ್ತು ನೀರು ಸಂರಕ್ಷಣೆ’ ಕುರಿತ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

‘ಹಲವು ಕಡೆ ಈಗಾಗಲೇ ಸಾಕಷ್ಟು ಭೂಮಿ ಸವಳು ಮತ್ತು ಜವಳಿನಿಂದ ಇಳುವರಿ ಕುಂಠಿತವಾಗಿದೆ. ಆದ್ದರಿಂದ, ನೀರಿನ ಸದ್ಬಳಕೆ ಮಾಡಿಕೊಂಡು ಸಮಗ್ರ ಕೃಷಿ ಪದ್ಧತಿ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ, ‘ದೇಶದಲ್ಲಿ ವಿದ್ಯುತ್‌ ಪೂರೈಕೆಗೆ ಅಪಾರ ಬೇಡಿಕೆ ಇದೆ. ಆದರೆ, ದೇಶದಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆ ಇದೆ. ಆದ್ದರಿಂದ ಪರ್ಯಾಯ ಮತ್ತು ಕಡಿಮೆ ವಿದ್ಯುತ್‌ ಬಳಸುವ ಕೃಷಿ ಪಂಪ್‌ಸೆಟ್‌ಗಳನ್ನು ಬಳಸಬೇಕಾಗಿದೆ’ ಎಂದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ನಿವೃತ್ತ ಕುಲಪತಿ ಡಾ.ಆರ್.ಆರ್. ಹಂಚಿನಾಳ, ‘ಇತ್ತಿಚೀನ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕೃಷಿಕರು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಣ್ಣು ಮತ್ತು ನೀರು ಸದ್ಬಳಕೆಯ ಜಾಗೃತಿ ಅವಶ್ಯವಾಗಿದೆ’ ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಮಹಾಂತೇಶ ಮುರಗೋಡ ಸರ್ಕಾರದ ಸೌಲಭ್ಯಗಳು ಮತ್ತು ಯೋಜನೆಗಳ ಮಾಹಿತಿ ನೀಡಿದರು.

ಕೇಂದ್ರದ ವಿಜ್ಞಾನಿಗಳಾದ ಎಸ್.ಎಂ. ವಾರದ, ಜಿ.ಬಿ. ವಿಶ್ವನಾಥ, ಅನಿಲ ಜೋಶಿ ಉಪನ್ಯಾಸ ನೀಡಿದರು.

ಕೇಂದ್ರದ ಮುಖ್ಯಸ್ಥೆ ಶ್ರೀದೇವಿ ಅಂಗಡಿ ಸ್ವಾಗತಿಸಿದರು. ವಿಜ್ಞಾನಿ ಎಸ್.ಎಂ. ವಾರದ ನಿರೂಪಿಸಿದರು. ವಿಜ್ಞಾನಿ ಡಾ.ಎಸ್.ಎಸ್. ಹಿರೇಮಠ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here