ದಾವಣಗೆರೆ: ವಾರಾಂತ್ಯದ ಕರ್ಫ್ಯೂ ಇದ್ದರೂ ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಅವರು ತನ್ನ ಜನುಮ ದಿನವನ್ನು ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ.
ದಾವಣಗೆರೆ ಕೆ.ಬಿ. ಬಡಾವಣೆಯಲ್ಲಿರುವ ತನ್ನ ಮನೆಯ ಮುಂದೆ ಶಾಮಿಯಾನ, ವೇದಿಕೆ, ಕುರ್ಚಿಗಳನ್ನು ಹಾಕಲಾಗಿತ್ತು.
ಅಭಿಮಾನಿಗಳು, ಜನಪ್ರತಿನಿಧಿಗಳು, ಬಿಜೆಪಿ ಕಾರ್ಯಕರ್ತರು, ಅಧಿಕಾರಿಗಳು, ಪೊಲೀಸರು ಭಾಗವಹಿಸಿ ಶಾಸಕರಿಗೆ ಶುಭಕೋರಿದರು. ಮಾಸ್ಕ್, ಅಂತರ ನಿಯಮಗಳಿಲ್ಲದೇ ಜನುಮದಿನದ ಆಚರಣೆ ನಡೆಯಿತು. ಬಂದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
‘ನಮ್ಮಿಂದ ಯಾರೂ ಹುಟ್ಟಿದ ಹಬ್ಬದ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ. ನಮಗೆ ಯಾವುದೇ ಮಾಹಿತಿ ಇಲ್ಲ’ ಎಂದು ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಪ್ರತಿಕ್ರಿಯಿಸಿದ್ದಾರೆ.
ಕೊರೊನಾ ನಿಯಮ, ವಾರಾಂತ್ಯ ಕರ್ಫ್ಯೂ ನಿಯಮ ಜನಸಾಮಾನ್ಯರಿಗೆ, ವಿರೋಧ ಪಕ್ಷಗಳಿಗೆ ಮಾತ್ರವೇ? ಬಿಜೆಪಿ ಶಾಸಕರಿಗೆ ಅನ್ವಯವಾಗುದಿಲ್ಲವೇ? ಕಳೆದ ವಾರ ಹೋರಿ ಹಬ್ಬದಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೋವಿಡ್ ನಿಯಮ ಮುರಿದಿದ್ದರು. ಈ ವಾರ ಜಗಳೂರು ಶಾಸಕರು ನಿಯಮ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹರೀಶ್ ಬಸಾಪುರ ಟೀಕಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…