ಸುರಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃಧ್ಧಿ ಯೋಜನೆ ಮತ್ತು ನಗನೂರು ಶ್ರೀ ಶಕ್ತಿ ಜ್ಞಾನ ವಿಕಾಸ ಕೇಂದ್ರ ಸಭೆಯಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದ ಗೌರವಧ್ಯಕ್ಷತೆ ವಹಿಸಿಕೊಂಡಿದ್ದ ನಗನೂರು ಸೂಗುರೇಶ್ವರ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹಾಗು ಕಂಡಪ್ಪ ಮುತ್ಯಾ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಸಂಸ್ಥೆಯ ಯೋಜನಾಧಿಕಾರಿ ಸಂತೋಷ ಮಾತನಾಡಿ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಪ್ರಾರಂಭ ಹಾಗು ಸಂಸ್ಥೆಯ ಕಾರ್ಯಕ್ರಮಗಳು ಮತ್ತು ಜ್ಞಾನ ವಿಕಾಸ ಕಾಂiiಕ್ರಮದ ಆಶಯ,ಸಂಘದ ಮೂಲಕ ಸದಸ್ಯರಲ್ಲಿ ಉಳಿತಾಯ,ಆರ್ಥಿಕ ಶಿಸ್ತು ಕಲಿಸುತ್ತಿರುವ ಬಗ್ಗೆ ತಿಳಿಸಿಕೊಟ್ಟರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ವಕೀಲ ವಿಶ್ವನಾಥರಡ್ಡಿ ಮಾತನಾಡಿ,ಮಹಿಳಾ ಶಿಕ್ಷಣ,ಮಹಿಳೆಯರ ಆಸ್ತಿ ಹಕ್ಕು ಮತ್ತು ಮಹಿಳೆಯರ ಮದುವೆ ವಯಸ್ಸು ೨೧ ವರ್ಷದ ನಂತರ ಮಾಡುವ ಕುರಿತು ಬದಲಾದ ಕಾನೂನಿನ ಬಗ್ಗೆ ಜಾಗೃತಿ ಮೂಡಿಸಿದರು.ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯಗುರು ಅಯ್ಯಣ್ಣ,ಶಿಕ್ಷಕರಾದ ಭೀಮಾ ಸಿಂಗ್,ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸವಿತಾ,ವಲಯ ಮೇಲ್ವಿಚಾರಕರಾದ ಶಶಿಕುಮಾರ್,ಕಛೇರಿ ಸಹಾಯಕ ರಮೇಶ್ ಸೇವಾ ಪ್ರತಿನಿಧಿಗಳು ಹಾಗು ಸದಸ್ಯರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…