ಬೆಳಗಾವಿ: ‘ಇಲ್ಲಿನ ಮಹಾನಗರಪಾಲಿಕೆಯಲ್ಲಿ ಅನಧಿಕೃತ ಮೇಯರ್- ಉಪ ಮೇಯರ್ ಇದಾರೆ. ಅನಧಿಕೃತವಾಗಿ ಅಧಿಕಾರ ನಡೆಸಲು ಸರ್ಕಾರವೇ ಅವಕಾಶ ನೀಡಿದೆ. ಕಾಂಗ್ರೆಸ್ ವತಿಯಿಂದ ಅವರಿಬ್ಬರಿಗೂ ಗೌನ್ ಕೊಡಲಾಗುವುದು. ಅವರೇ ಅಧಿಕಾರ ನಡೆಸಲಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬಿಜೆಪಿ ಶಾಸಕರಾದ ಅಭಯ ಪಾಟೀಲ ಮತ್ತು ಅನಿಲ ಬೆನಕೆ ಅವರನ್ನು ಟೀಕಿಸಿದರು.
ಇಲ್ಲಿ ಮೇಯರ್ ಆಯ್ಕೆ ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಆ ಶಾಸಕರ ಕೈಯಲ್ಲಿ ಆಡಳಿತವಿದೆ. ಉಳಿದವರು ಟೀ-ಬಿಸ್ಕತ್ತುಗೆ ಸೀಮಿತವಾಗಿದ್ದಾರೆ’ ಎಂದು ಲೇವಡಿ ಮಾಡಿದರು.
‘ನಗರದಲ್ಲಿ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ಆರಂಭದಿಂದ ರೈತರಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಆದರೆ, ಆ ಮಾರುಕಟ್ಟೆ ಪರವಾಗಿ ಸರ್ಕಾರವೇ ನಿಂತಿದೆ. ಅದನ್ನು ಸರ್ಕಾರವೇ ತಡೆಗಟ್ಟಬೇಕು’ ಎಂದು ಒತ್ತಾಯಿಸಿದರು.
‘ಗೋವಾದಲ್ಲಿ ಚುನಾವಣಾ ಉಸ್ತುವರಿ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವಂತೆ ಮಾಡಲು ತಯಾರಿ ನಡೆಸಿದ್ದೇವೆ. ನಾನು ಇಪ್ಪತ್ತು ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ನಡೆಸುತ್ತೇನೆ’ ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಮುಖಂಡರಾದ ಎ.ಬಿ. ಪಾಟೀಲ, ಸುಶೀಲ ಬೆಳಗಲಿ ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…