ಸುರಪುರ: ತಾಲ್ಲೂಕಿನ ಬಾದ್ಯಾಪುರ ಗ್ರಾಮದಲ್ಲಿನ ಕೆಲ ಬಡ ರೈತರ ಜಮೀನನ್ನು ಮೋಸದಿಂದ ತಮ್ಮ ಹೆಸರಿಗೆ ವರ್ಗಾವಣೆ ಮಾಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಹೆಚ್.ಡಿ.ಕುಮಾರಸ್ವಾಮಿ ಸೇನೆಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹೆಚ್.ಡಿ.ಕುಮಾರಸ್ವಾಮಿ ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ಕೊರವ ಜನಾಂಗದ ಬಡ ರೈತರಾದ ಭೀಮಪ್ಪ,ಮಲ್ಲಪ್ಪ,ಮಲ್ಲಿಕಾರ್ಜುನ,ಮೈಲಾರಿ,ಹಣಮಂತ,ಶರಣಪ್ಪ ಎಂಬ ರೈತರು ಬೇರೆಯವರಿಗೆ ಒಂದಿಷ್ಟು ಜಮೀನನ್ನು ಮಾರಾಟ ಮಾಡಿದ್ದು,ಇವರ ಸರ್ವೆ ನಂಬರ್ ೮೫/೧ ಮತ್ತು ೮೫/೨ ರಲ್ಲಿನ ಇನ್ನುಳಿದ ಜಮೀನನ್ನು ಮೋಸದಿಂದ ತಮ್ಮ ಹೆಸರಿಗೆ ವರ್ಗಾವಣೆ ಮಾಡಿಸಿಕೊಳ್ಳಲಾಗಿದೆ.ಆದ್ದರಿಂದ ಜಿಲ್ಲಾಧಿಕಾರಿಗಳು ಕೂಡಲೆ ಈ ಬಡ ರೈತರಿಗಾದ ಅನ್ಯಾಯಕ್ಕೆ ಸ್ಪಂಧಿಸಿ ಇವರ ಜಮೀನನ್ನು ಕೊಡಿಸಬೇಕೆಂದು ಆಗ್ರಹಿಸಿ ತಹಸೀಲ್ ಸಿರಸ್ತೆದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ಬಸವರಾಜ ಕವಡಿಮಟ್ಟಿ,ದೇವಪ್ಪ ದೇವರಮನಿ,ಭೀಮರಾಯ ಭಜಂತ್ರಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…