ಆಳಂದ: ಯುವನದಲ್ಲಿ ಮಾನಸಿP ಮತ್ತು ದೈಹಿಕವಾಗಿ ಆರೋಗ್ಯದಲ್ಲಿ ಬದಲಾವಣೆ ಸಹಜವಾಗಿರುತ್ತದೆ. ಆದರೆ ಈ ಕುರಿತು ಆತಂಕ ಪಡುವ ಅಗತ್ಯವಿಲ್ಲ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ವಿಜಯಲಕ್ಷ್ಮಿ ನಂದಿಕೋಲಮಠ ಅವರು ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಂತರಿಕ ಗುಣಮಟ್ಟ ಭರವಸೆಕೋಶ ಹಾಗೂ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಮಹಿಳಾ ಆರೋಗ್ಯ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಸದಾ ಕಾಳಜಿ ವಹಿಸಬೇಕು ಸಮಸ್ಯೆಯ ಬಗ್ಗೆ ನಿರ್ಲಕ್ಷ್ಯ ಮಾಡದೆ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ನಿಂಗಪ್ಪ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು, ಆರೋಗ್ಯ ಸಂರಕ್ಷಣೆ ಮತ್ತು ಕಲಿಕೆ ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಈ ಎರಡನ್ನು ನಿರ್ಲಕ್ಷಿಸದೆ ಓದು ಮತ್ತು ಆರೋಗ್ಯದ ಕಡೆ ಗಮನ ಹರಿಸಬೇಕು ಎಂದು ಹೇಳಿದರು.
ಘಟಕದ ಸಂಯೋಜಕ ಡಾ. ಪ್ರೆಮಿಳಾ, ಸಾಂಸ್ಕೃತಿಕ ಕಾರ್ಯದರ್ಶಿ ಡಾ. ಶಾಂತಲಾ ಪಾಟೀಲ್, ಉದ್ಯೋಗ ಮಾಹಿತಿ ಘಟಕದ ಸಂಯೋಜಕಿ ಗೀತಾ, ಆಪ್ತ ಸಮಾಲೋಚಕಿ ಸಾವಿತ್ರಿ ಸೇರಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.