ಬಿಸಿ ಬಿಸಿ ಸುದ್ದಿ

ಕ್ಷಯ ರೋಗ ಮುಕ್ತ ಕರ್ನಾಟಕಕ್ಕೆ ಗ್ರಾಮದ ಜನರು ಕೈ ಜೋಡಿಸಿ ಜಬ್ಬರ್

ಕಲಬುರಗಿ: ಸಮುದಾಯದಲ್ಲಿ  ಕ್ಷಯರೋಗದ (ಟಿಬಿ) ಲಕ್ಷಣಗಳು ಇರುವ ಯಾವುದೇ ವ್ಯಕ್ತಿ ಕಂಡು ಬಂದರೆ ಅವರಿಗೆ ಕ್ಷಯರೋಗ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಬೇಕು ಗುಣಮುಖವಾಗುವಂತಹ ರೋಗವಾಗಿದೆ ಇದರ ಬಗ್ಗೆ ಭಯ ಪಡದೆ ಕ್ಷಯ ಖಚಿತವಾಗಿರುವ ರೋಗಿಗು  ಸರಿಯಾದ  ರೀತಿಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖವಾದಗ ಕ್ಷಯರೋಗ ಮುಕ್ತ ಕರ್ನಾಟಕ ಮಾಡಲು ಸಾಧ್ಯವಿದೆ ಕ್ಷಯ ರೋಗ ಮುಕ್ತ ಕರ್ನಾಟಕಕ್ಕೆ ಗ್ರಾಮದ ಜನರು ಕೈ ಜೋಡಿಸಬೇಕೆಂದು ಜಿಲ್ಲಾ ಕ್ಷಯರೋಗ ನಿರ್ಮೂಲನ ಜಿಲ್ಲಾ ಕ್ಷಯರೋಗ ಡಿಪಿಸಿ ಅಬ್ದುಲ್ ಜಬ್ಬರ್ ಹೇಳಿದರು.

ಅವರು ವಾಡಿ  (ಜಂ) ಪಟ್ಟಣದ  ಲಾಡಲಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಮತ್ತು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಕಲಬುರಗಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಹಾಗಾಂವ ಇವರ ಸಂಯೋಗದಲ್ಲಿ ಹಮ್ಮಿಕೊಂಡ. ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಟಿಬಿ ಸೋಲಿಸಿ ಕರ್ನಾಟಕದಲ್ಲಿ ಗೆಲ್ಲಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ವಿದ್ಯಾರ್ಥಿಗಳಲ್ಲಿ ಹಾಗೆ  ಸಾಮಾನ್ಯ ಪ್ರಜೆಗಳು ಕೈ ಜೋಡಿಸುವುದರ ಜೊತೆಗೆ ನಿಮ್ಮ ಊರಿನ ಸಮುದಾಯದ ಜನರಿಗೆ ಕ್ಷಯರೋಗ  ಕುರಿತು ಅರಿವು ಮಾಹಿತಿ ನೀಡಬೇಕು ಅಂದಾಗ ಮಾತ್ರ ರೋಗ ತಡೆಯಲು ಸಾಧ್ಯವೆಂದರು ಅವರು ಸರ್ಕಾರ ಕೈಗೊಂಡಿರುವ ಮಹತ್ವದ ಕಾರ್ಯಕಪ್ರ.  ಟಿಬಿ ಸೋಲಿಸಿ ಕರ್ನಾಟಕ ಗೆಲ್ಲಿಸಿ 2025 ರ ಒಳಗೆ ಎಂಬ ಘೋಷವಾಕ್ಯದಂತೆ ಸಮುದಾಯದ ಜನರು ಕ್ಷಯರೋಗ ನಿರ್ಮೂಲನಗೆ ಪಣ ತೊಡಬೇಕೆಂದರು.

ನಂತರ ತಾಲ್ಲೂಕ ಹಿರಿಯ ಕ್ಷಯರೋಗ ಮೇಲ್ವಿಚಾರಕ ಉದಯಕುಮಾರ್ ಭಾಗೋಡಿ, ಅವರು ಮಾತನಾಡುತ್ತ ಚಿತ್ತಾಪುರ ತಾಲುಕಿನ ವಾಡಿ ಪಟ್ಟಣ, ಹಲಕಟ್ಟ, ಲಾಡಲಪುರ, ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಿಂದ ಗ್ರಾಮದ ಜನರಿಗೆ ಮಾಹಿತಿ ನೀಡುವುದು ಬಹಳ ಮುಖ್ಯ ಅದರಿಂದ ಕ್ಷಯರೋಗ ಗಾಳಿ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುವಂತ ರೋಗವಾಗಿದ್ದು ಪ್ರತಿ ಒಬ್ಬರು ಎಚ್ಚರವಹಿಸಬೇಕು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಕ್ಷಯರೋಗ ಪರೀಕ್ಷೆ  ಮತ್ತು ಚಿಕಿತ್ಸೆ ಸಂಪೂರ್ಣವಾಗಿ ಉಚಿತ ಇರುತ್ತದೆ. ಮತ್ತು ಆರು ತಿಂಗಳ ಚಿಕಿತ್ಸೆಯ ಸಂಧರ್ಬದಲ್ಲಿ ರೋಗಿಗಳಿಗೆ ಪೌಷ್ಟಿಕ ಆಹಾರ ಸಂಬಂದ ಮಾಸಿಕ  ೫೦೦ ರೂ, ಗಳನ್ನು ಕೊಡಲಾಗುತ್ತದೆ ಇದರ ಉಪಯೋಗ ಪ್ರತಿ ರೋಗಿಯು ಪಡೆಯಬೇಕು ಎಂದು ತಿಳಿಸಿದರು.

ಪ್ರಮುಖರಾದ ತಾಲ್ಲೂಕ ಕಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ವಿರೂಪಾಕ್ಷಯ್ಯ ಸ್ವಾಮಿ, ಕಿರಿಯ ನೀರಿಕ್ಷಣಾಧಿಕಾರಿ ಮೌನೇಶ್  ಪತ್ತಾರ , ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಅಂಜು ಚಾವ್ಹಣ್, ಅವರು ಕೋವಿಡ್ ಲಸಿಕೆ ಹಾಗೂ ಕರೋನದಿಂದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವವರಿಸಿದ್ದರು ಆರೋಗ್ಯ ಮಾಹಿತಿ ನೀಡಿದರು.

ಕ್ಷಯರೋಗ ಕುರಿತು ಮಾಹಿತಿ ನೀಡಿ. ಬಿತ್ತಿ ಪತ್ರ ಮೂಲಕ ಜಾಗೃತಿ ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮದ ಸದಸ್ಯರು ಆಶಾ ಕಾರ್ಯಕರ್ತೆಯರು, ಇತರರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

24 mins ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

11 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

11 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

13 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

13 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago