ಸುರಪುರ: ಕೃಷ್ಣಾ ಮೇಲ್ದಂಡೆಯ ಕಾಲುವೆಗಳಿಗೆ ನೀರು ಹರಿಸಲು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ನೀರಾವರಿ ಸಲಹಾ ಸಮಿತಿಗೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಯ ಮುಖ್ಯ ಅಭಿಯಂತರರಿಗೆ ಪತ್ರ ಬರೆದಿರುವ ಅವರು,ಈಗಾಗಲೇ ತಾಲ್ಲೂಕಿನಲ್ಲಿ ಸರಿಯಾದ ಮಳೆ ಇಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ.ಆದರೆ ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಬೀಳುತ್ತಿರುವ ಕಾರಣದಿಂದ ಆಲಮಟ್ಟಿ ಮತ್ತು ನಾರಾಯಣಪೂರ ಆಣೆಕಟ್ಟುಗಳು ಭತಿಯಾಗಿದ್ದು ನದಿಗೆ ನೀರು ಹರಿಬಿಡಲಾಗುತ್ತಿದೆ.ಅದೇ ನೀರನ್ನು ವ್ಯರ್ಥವಾಗಿ ನದಿಗೆ ಹರಿಸುವ ಬದಲಾಗಿ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ನದಿಗೆ ನೀರು ಹರಿಸುವ ಬದಲು ಕೃಷ್ಣಾ ಮೇಲ್ದಂಡೆ ಕಾಲುವೆಗಳಿಗೆ ಹರಿಸಿದಲ್ಲಿ ರೈತರಿಗೆ ಅನುಕೂಲವಾಗಲಿದೆ.
ಈಗಾಗಲೇ ಸತತ ಬರಗಾಲದಿಂದ ಕಂಗೆಟ್ಟಿರುವ ರೈತರು ಭೂಮಿ ಹದಗೊಳಿಸಿಕೊಂಡು ಕಾಲುವೆಗಳ ಕಡೆಗೆ ಮುಖಮಾಡಿ ಎದರು ನೋಡುತ್ತಿದ್ದಾರೆ.ಕಾಲುವೆಗಳಿಗೆ ಕೂಡಲೆ ನೀರು ಹರಿಸಿದರೆ ರೈತರ ಚಟುವಟಿಕೆಗಳು ಆರಂಭಗೊಳ್ಳಲಿವೆ.ಆದ್ದರಿಂದ ಕೂಡಲೆ ಸಲಹಾ ಸಮಿತಿ ಸಭೆ ನಡೆಸಿ ನೀರು ಬಿಡುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.