ಬಿಸಿ ಬಿಸಿ ಸುದ್ದಿ

ಅನಿಷ್ಟ ಪದ್ಧತಿಗಳ ನಿವಾರಣೆಗೆ ವೇಮನರ ಪಾತ್ರ ಮಹತ್ವದ್ದು: ಅಂಜಲಿ ಗಿರೀಶ ಕಂಬಾನೂರ

ಶಹಾಬಾದ : ಸಾಮಾಜಿಕ ನ್ಯಾಯ, ಮಹಿಳೆಯರ ರಕ್ಷಣೆ, ವಿಧವೆಯರಿಗೆ ಸ್ಥಾನಮಾನ, ಹೆಣ್ಣು ಮಕ್ಕಳ ರಕ್ಷಣೆ, ಸಮಾಜದ ಕೆಲವು ಅನಿಷ್ಟ ಪದ್ದತಿಗಳ ನಿವಾರಣೆಗೆ ಮಹಾಯೋಗಿ ವೇಮನ ಅವರು ಸಾಕ? ದುಡಿದು, ಸಮಾಜ ಸುಧಾರಣೆ ಶ್ರಮಿಸಿದವರಲ್ಲಿ ಅಗ್ರಗಣ್ಯರಾಗಿದ್ದಾರೆ ಎಂದು ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.

ಅವರು ಬುಧವಾರ ನಗರಸಭೆ ಕಾರ್ಯಾಲಯದಲ್ಲಿ ಆಯೋಜಿಸಲಾದ ’ಮಹಾಯೋಗಿ ವೇಮನ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಮಹನೀಯರ ಅರಿವು ಯುವಪೀಳಿಗೆಗೆ ಇರಲಿ ಎಂಬ ಉದ್ದೇಶ. ಒಬ್ಬ ಶ್ರೀಮಂತ ಕುಟುಂಬದಲ್ಲಿ ಜನಿಸಿದ ವೇಮನರು ಭೋಗ ಜೀವನದಿಂದ ಹೊರಬಂದು ವೈರಾಗ್ಯ ಜೀವನವನ್ನು ಅರಸುವುದು ನಿಜಕ್ಕೂ ಅದ್ಬುತ ಸಂಗತಿ. ವೇಮನರ ದೂರದೃಷ್ಠಿ ಅರಿಯುವುದರ ಜೊತೆಗೆ ಅವರ ಆದರ್ಶವನ್ನು ಪ್ರತಿನಿತ್ಯ ಪಾಲಿಸಬೇಕು. ಇವರು ಮಲ್ಲಮ್ಮ ಮತ್ತು ಕುಮಾರಗಿರಿರೆಡ್ಡಿ ಅವರ ಮಗನಾಗಿ ಜನಿಸಿದರು. ತಮ್ಮ ಅತ್ತಿಗೆ ಹೇಮರೆಡ್ಡಿ ಮಲ್ಲಮ್ಮನ ಹಿತವಚನದಿಂದ ಸಮಾಜದ ಮಹಾಪುರು?ನಾದ. ಅವರ ವಚನಗಳ ಅಂಕಿತ ’ವಿಶ್ವದಾಭಿರಾಮ ಕೇಳೋ ವೇಮ’ ಎಂಬುದಾಗಿದೆ. ಆತ್ಮ ವಿಮರ್ಶೆ ಹಾಗೂ ಆತ್ಮ ಶುದ್ಧಿಯಿಂದ ಇದ್ದವ ಜಗತ್ತನ್ನೇ ಗೆಲ್ಲಬಲ್ಲ ಎಂಬ ಸಂದೇಶವನ್ನು ಸಾರಿದ್ದಾರೆ ಎಂದರು.

ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿ, ಸಮಾಜ ಸುಧಾರಕರ ಸಾಧನೆ ಸ್ಮರಿಸಲು ಸರ್ಕಾರ ಜಯಂತಿಗಳ ಆಚರಣೆ ಜಾರಿಗೆ ತಂದಿದೆ. ಜಯಂತಿಗಳ ಆಚರಣೆ ಮೂಲಕ ಸಮಾಜದ ಸಂಘಟನೆ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ. ಸಮಾಜ ಸುಧಾರಕರ ಜೀವನದ ಆದರ್ಶಗಳನ್ನು ಅಳವಡಿಸಿಕೊಂಡು, ಸಮಾಜ ಸೇವೆ ಮಾಡಬೇಕು. ಸಮಾಜಕ್ಕೆ ಪ್ರತಿನಿತ್ಯ ಕೊಡುಗೆ ನೀಡುತ್ತಲೇ ಇರಬೇಕು. ಸಮಾಜದ ಒಳಿತಿಗಾಗಿ ಶ್ರಮಿಸಬೇಕು ಎಂದರು.

ನಗರಸಭೆಯ ಉಪಾಧ್ಯಕ್ಷೆ ಸಲೀಮಾಬೇಗಂ, ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಶರಣಬಸಪ್ಪ ಪಗಲಾಪೂರ, ಶಿವರಾಜಕುಮಾರ, ರಘುನಾಥ ನರಸಾಳೆ,ನಾರಾಯಣರೆಡ್ಡಿ, ಶಂಕರ ಕುಸಾಳೆ, ಶಿವರಾಜ ಕೋರೆ,ಶಾಂತರೆಡ್ಡಿ ದಂಡಗುಲಕರ್ ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

20 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago