ಆಳಂದ: ನಾರಾಯಣ ಗುರುಗಳ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಅಳವಡಿಸಲು ಕೇಂದ್ರ ಸರಕಾರ ನಿರಾಕರಿಸಿದೆ ಎಂಬ ತಪ್ಪು ಮಾಹಿತಿಯನ್ನು ನೀಡಿ ಕಾಂಗ್ರೆಸ್ ಪಕ್ಷವು ಇದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಮುಂದಾಗಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ೨೦೧೫ರ ಡಿಸೆಂಬರ್ ೧೫ರಂದು ನಾರಾಯಣ ಗುರುಗಳ ಸಂಕಲ್ಪ ಕೇಂದ್ರವಾದ ಶಿವಗಿರಿಗೆ ಭೇಟಿ ನೀಡಿದ್ದರು. ಒಂದು ಕಾಲದಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಕೇರಳದಲ್ಲಿ ಮೇಲು-ಕೀಳು, ಜಾತಿ- ಧರ್ಮಗಳ ತಾರತಮ್ಯದ ನೆಲೆವೀಡಾಗಿದ್ದ ನೆಲದಲ್ಲಿ, ನಾರಾಯಣಗುರುಗಳು ತಂದ ಸಾಮಾಜಿಕ ಪರಿವರ್ತನೆಯಿಂದಾಗಿ ಕೇರಳವಿಂದು ಸಮಾನತೆಯ ಸಂದೇಶ ಸಾರುವ ನಾಡಾಗಿದೆ. ನಾರಾಯಣಗುರುಗಳ ಆದರ್ಶವು ಜಗತ್ತಿಗೇ ಬೆಳಕು ನೀಡಬಲ್ಲದು ಎಂದು ಹೇಳಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರ ಅನಾವರಣ ಮಾಡಿದ್ದರು. ಇದು ಕಾಂಗ್ರೆಸ್‌ಗೆ ಗೊತ್ತಿದ್ದೂ ಅಪಪ್ರಚಾರ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಮತ್ತು ಖಂಡನೀಯವಾಗಿದೆ ಎಂದು ಹೇಳಿದ್ದಾರೆ.
ಕೇರಳದ ಕಮ್ಯೂನಿಷ್ಟ್ ಸರಕಾರಕ್ಕೆ ೨೦೨೧ರ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸ್ತಬ್ಧಚಿತ್ರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಅದನ್ನು ಮರೆತು ಕೇರಳ ಸರಕಾರವು ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ಕೇಳಿದೆ. ಸ್ತಬ್ಧಚಿತ್ರಕ್ಕೆ ಅವಕಾಶ ನೀಡದೆ ಇದ್ದರೆ ಅದನ್ನೇ ಕೇಂದ್ರದ ವಿರುದ್ಧ ಬಳಸಿಕೊಳ್ಳುವ ಹುನ್ನಾರ ಇದರ ಹಿಂದೆ ಇರುವಂತಿದೆ ಎಂದು ಆರೋಪಿಸಿದ್ದಾರೆ.
ಕೇರಳದ ಈಳವರು, ಕರ್ನಾಟಕದ ಈಡಿಗರು, ನಾಮಧಾರಿಗಳು, ಕರಾವಳಿ ಜಿಲ್ಲೆಗಳ ಬಿಲ್ಲವರು, ರಾಜ್ಯಗಳಲ್ಲಿರುವ ಸುಮಾರು ೨೦ಕ್ಕೂ ಹೆಚ್ಚು ಉಪ ಪಂಗಡಗಳು ನಾರಾಯಣ ಗುರುಗಳನ್ನು ಕುಲದೇವರನ್ನಾಗಿ ಸ್ವೀಕರಿಸಿವೆ. ಅವರ ಹೆಸರಿನಲ್ಲಿ ಮಂದಿರಗಳನ್ನೂ ನಿರ್ಮಿಸಿ ನಿತ್ಯ ಪೂಜೆ ಸಲ್ಲಿಸುತ್ತಿದ್ದಾರೆ. ಇವರನ್ನು ಕೆರಳಿಸುವುದು iತ್ತು ಕೇಂದ್ರ ಸರಕಾರದ ವಿರುದ್ಧ ಎತ್ತಿ ಕಟ್ಟುವ ಕಾರ್ಯವನ್ನು ಕಮ್ಯೂನಿಸ್ಟ್ ಪಕ್ಷ ಮಾಡುತ್ತಿದೆ. ಕೇಂದ್ರ ಸರಕಾರದ ವಿರುದ್ಧ ಹಿಂದುಳಿದ ವರ್ಗಗಳನ್ನು ಎತ್ತಿ ಕಟ್ಟಿ ಹಿಂದೂ ಸಮಾಜವನ್ನು ಒಡೆಯುವ ಕಾರ್ಯದ ಚಿಂತನೆಯೂ ಇದರ ಹಿಂದೆ ಇದೆ ಇದು ಆಕ್ಷೇಪಾರ್ಹ ಎಂದು ತಿಳಿಸಿದ್ದಾರೆ.
ಮತಾಂತರ ತಡೆಯುವ ನಿಟ್ಟಿನಲ್ಲಿ ನಾರಾಯಣ ಗುರುಗಳ ಪಾತ್ರ ಮಹತ್ವದ್ದು, ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಅವರು ಬಹುದೊಡ್ಡ ಕೊಡುಗೆಯನ್ನೂ ಅವರು ನೀಡಿದ್ದಾರೆ.
ಈಳವರು, ಪರಿಶಿಷ್ಟರು ಮತ್ತು ಬಡವರನ್ನು ಸಾಮೂಹಿಕವಾಗಿ ಮತಾಂತರ ಮಾಡುತ್ತಿದ್ದಾಗ ಶೂದ್ರರಿಗೂ ಈಶ್ವರನನ್ನು ಪೂಜಿಸಲು ನಾರಾಯಣ ಗುರುಗಳು ಅವಕಾಶ ಮಾಡಿಕೊಟ್ಟಿದ್ದರು ಅಂಥ ಶ್ರೇಷ್ಠ ಸಂತನ ಹೆಸರನ್ನು ಕಾಂಗ್ರೆಸ್‌ನವರು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ ಇದು ಖಂಡನಾರ್ಹವಾಗಿದೆ ಎಂದು ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…