ಮಲಬಾರ್ ಚಾರಿಟಬಲ್ ಟ್ರಸ್ಟ್ ನಿಂದ 13.26ಲಕ್ಷ ರೂ.ವಿದ್ಯಾರ್ಥಿ ವೇತನ ವಿತರಣೆ

0
13

ಆನೇಕಲ್: ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು‌
ಬುಧವಾರ ಆನೇಕಲ್ ಡಾ. ಎಸ್.ಗೋಪಾಲರಾಜು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 125 ಪದವಿ ವಿದ್ಯಾರ್ಥಿನಿಯರಿಗೆ ಒಟ್ಟಾರೆ 13ಲಕ್ಷದ 26 ಸಾವಿರ ರೂ. ಸಹಾಯಧನವನ್ನು ಮಲಬಾರ್ ಚಾರಿಟಬಲ್ ಟ್ರಸ್ಟ್ ಕೋರಮಂಗಲ ಶೋರೂಂನಿಂದ ವಿತರಿಸಲಾಗಿದೆ‌. ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ 10 ಸಾವಿರ ರೂ. ಹಾಗೂ ಉಳಿದವರಿಗೆ 8 ಸಾವಿರ ರೂ.ವನ್ನು ನೀಡಲಾಗಿದೆ.
ಈ ವೇಳೆ ಮಲಬಾರ್ ಚಾರಿಟಬಲ್ ಟ್ರಸ್ಟ್ ನ ಮುಖ್ಯಸ್ಥ ದೀಪು ಮಾತನಾಡಿ, ಮಲಬಾರ್ ಆಭರಣ ಮಳಿಗೆಯ ಒಟ್ಟು ಆದಾಯದಲ್ಲಿ ಶೇ.5ರಷ್ಟನ್ನು ಸಾಮಾಜಿಕ ಸೇವಾ ಕಾರ್ಯಕ್ಕೆ ಮೀಸಲಿರಿಸಿದ್ದೇವೆ‌‌‌. ವಿದ್ಯಾರ್ಥಿ ವೇತನ, ಆರೋಗ್ಯ ಸೇವೆ ಹಾಗೂ ಬಡ ಹೆಣ್ಣು ಮಕ್ಕಳ ಮದುವೆಗೆ ಉಚಿತ ಚಿನ್ನಾಭರಣ ವಿತರಣೆ ಸೇರಿದಂತೆ ಹಲವರು ಸಾಮಾಜಿಕ ಸೇವೆಯಲ್ಲಿ ತೊಡಗಿದೆ ಎಂದು ತಿಳಿಸಿದ್ದಾರೆ.
ಡಾ.ಎಸ್.ಗೋಪಾಲರಾಜು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಮಕೃಷ್ಣ ಮಾತನಾಡಿ, ಕೋವಿಡ್ ಲಾಕ್ ಡೌನ್ ನಿಂದಾಗಿ ಮಧ್ಯಮ ವರ್ಗ ಹಾಗೂ ಬಡ ಸಮುದಾಯದ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇದರಿಂದ ಈ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಮಲಬಾರ್ ಚಾರಿಟಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅದನ್ನು ವಿದ್ಯಾರ್ಥಿನಿಯರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಪ್ರಾಧ್ಯಾಪಕ ಧನಲಕ್ಷ್ಮಿ ಮಾತನಾಡಿ, ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಿಕ್ಕಿರುವ ವಿದ್ಯಾರ್ಥಿ ವೇತನವನ್ನು ಅನ್ಯ ಕಾರ್ಯಗಳಿಗೆ ವಿನಿಯೋಗಿಸದೆ, ವಿದ್ಯಾಭ್ಯಾಸಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಲಬಾರ್ ಚಾರಿಟಬಲ್ ಟ್ರಸ್ಟ್ ನ ಮ್ಯಾನೇಜರ್ ಅಶ್ರಫ್ ಅಲಿ. ಸಹಾಯಕ ವ್ಯವಸ್ಥಾಪಕ ಅನ್ಸಾರ್, ಡಾ. ಎಸ್. ಗೋಪಾಲರಾಜು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here