ಬಿಸಿ ಬಿಸಿ ಸುದ್ದಿ

ಮಾವು ಹೂ ಎಳೆ ಕಾಯಿ ಹಂತ ಮ್ಯಾಂಗೊ ಸ್ಪೇಷಲ್ ಸಿಂಪಡಣೆ

ಕಲಬುರಗಿ: ಉತ್ತಮ ಮಾವು ಫಸಲಿಗೆ ಬೆಳೆಯ ವಿವಿಧ ಹಂತಗಳಲ್ಲಿ ಸೂಕ್ತ ನಿರ್ವಹಣೆ ಮುಖ್ಯ. ಅದರಲ್ಲೂ ಮಾವು ಬೆಳೆಯ ಕೀಟ ರೋಗಗಳನ್ನು ಸೂಕ್ತ ಹಂತದಲ್ಲಿ ಗುರುತಿಸಿ ಅವುಗಳ ಸಮರ್ಪಕ ನಿರ್ವಹಣೆ ಮಾಡದಿದ್ದಲ್ಲಿ ಅಪಾರ ನಷ್ಟವಾಗುವುದು.ಮಾವು ಹೂ ಬಿಟ್ಟಾಗ ಮತ್ತು ಪರಾಗ ಸ್ಪರ್ಶ ಆಗುತ್ತಿರುವ ಸಮಯದಲ್ಲಿ ಗಂಧಕವನ್ನು ಸಿಂಪಡಿಸಬಾರದು.

ಏಕೆಂದರೆ, ಗಂಧಕವು ಪರಾಗ ಸ್ಪರ್ಶ ಕ್ರಿಯೆಗೆ ಸಹಕರಿಸುವ ಕೀಟಗಳಿಗೆ, ಅರಳಿದ ಹೂಗಳು ಮತ್ತು ಎಳೆಯ ಕಚ್ಚಿದ ಕಾಯಿಗಳಿಗೆ ಹಾನಿಯನ್ನಂಟು ಮಾಡುತ್ತದೆ. ಪರಾಗ ಸ್ಪರ್ಶ ಆಗುತ್ತಿರುವ ಸಮಯದಲ್ಲಿ ಯಾವುದೇ ಕಾರಣಕ್ಕೂ ಗಿಡಗಳಿಗೆ ನೀರುಣಿಸಬಾರದು. ಪರಾಗ ಸ್ಪರ್ಶ ಪೂರ್ಣಗೊಂಡ ನಂತರ ಕಾಯಿಯು ಬಟಾಣಿಯಿಂದ ಗೋಲಿ ಗಾತ್ರದ ಹಂತದಲ್ಲಿ ನೀರು ಕೊಡಲು ಪ್ರಾರಂಭಿಸಬಹುದು. ಎರಡು ಮತ್ತು ಮೂರು ರಕ್ಷಣಾತ್ಮಕ/ಪೂರಕ ನೀರಾವರಿ ಕೈಗೊಳ್ಳಬಹುದು. ಕಚ್ಚಿದ ಕಾಯಿಗಳು ಉದುರದಂತೆ ನೋಡಿಕೊಳ್ಳಲು ಚಿಕ್ಕ ಕಾಯಿಗಳು ಬೆಳೆಯುತ್ತಿರುವ ಹಂತದಲ್ಲಿ ಅವುಗಳಿಗೆ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆರವರು ಹೊರತಂದಿರುವ ಮ್ಯಾಂಗೊ ಸ್ಪೇಷಲ್ ವನ್ನು ಪ್ರತಿ ೧೦ ಲೀಟರ ನೀರಿನಲ್ಲಿ ೫೦ ಗ್ರಾಂ ಪ್ರಮಾಣದಲ್ಲಿ ಕರಗಿಸಿ ಸಿಂಪಡಿಸುವುದು.

ಈ ಸಿಂಪರಣಾ ದ್ರಾವಣಕ್ಕೆ ಸೋಪು ದ್ರಾವಣವನ್ನು ೦.೫ ಮಿ.ಲೀ/ಲೀ. ಮತ್ತು ಅರ್ಧ ಹೋಳು ನಿಂಬೆ ರಸ ಬೆರೆಸಿ ಸಿಂಪಡಿಸಿದರೆ, ಅದು ಪರಿಣಾಮಕಾರಿಯಾಗಿ ಕಾಯಿಗಳಿಗೆ ಅಂಟಿಕೊಳ್ಳುವುದು. ಪೊಟ್ಯಾಸಿಯಂ ನೈಟ್ರೇಟ ೧೩೦-೦-೪೫ ೨೦ ಗ್ರಾಂ/ಲೀ ಸಿಂಪಡಣೆಯನ್ನು ಕೈಗೊಳ್ಳುವುದರಿಂದ ಮೊಗ್ಗು ಅರಳಲು ಮತ್ತು ಏಕರೂಪದ ಹೂ ಬಿಡುವಿಕೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ ವಾಸುದೇವ ನಾಯ್ಕ ಮತ್ತು ಜಹೀರ್ ಅಹ್ಮದ ಕ್ಷೇತ್ರಕ್ಕೆ ಭೇಟಿ ನೀಡಿದರು.

ಬೂದಿರೋಗ ರೋಗ ಹೂ ಹಾಗೂ ಕಾಯಿ ಬಿಡುವ ಹಂತದಲ್ಲಿ ಹೆಚ್ಚಾಗಿ ಕಂಡು ಬರುವ ಈ ರೋಗದ ತೀವ್ರತೆ ರಾತ್ರಿಯಲ್ಲಿ ಕಡಿಮೆ ತಾಪಮಾನ ಹಾಗೂ ಹಗಲಿನಲ್ಲಿ ಹೆಚ್ಚು ತಾಪಮಾನವಿರುವಂತಹ ಚಳಿಗಾಲದ ವಾತಾವರಣದಲ್ಲಿ ಹೆಚ್ಚುವದು. ಹೂ ಗೊಂಚಲುಗಳ ಮೇಲೆ ಬಿಳಿ ಬಣ್ಣದ ಶಿಲೀಂಧ್ರದ ಬೆಳವಣಿಗೆಯಾಗಿ ನಂತರ ಸಣ್ಣ ಕಾಯಿ, ಎಲೆ ಹಾಗೂ ರೆಂಬೆಗಳ ಮೇಲೆ ಇದೆ ಲಕ್ಷಣಗಳು ಕಂಡು ಬಂದು, ರೋಗ ಪೀಡಿತ ಹೂಗಳ ಉದುರುವುದಲ್ಲದೆ, ಎಳೆಯ ಕಾಯಿಗಳು ಸಂಪೂರ್ಣವಾಗಿ ರೋಗದಿಂದ ಆವೃತವಾಗಿ ಉದುರುತ್ತ. ಶಿಲೀಂದ್ರನಾಶಕವಾದ ೧ ಮಿ.ಲೀ ಹೆಕ್ಸಾಕೋನೋಜೋಲ್ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪರಿಸಿರಿ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

17 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

17 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago