ಕಲಬುರಗಿ; ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಿಲಿಟ್ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಜ ಶಾಸ್ತ್ರಿ ಹೇರೂರ ಬರೆದಿರುವ ”ಗೀಗೀಪದಾಮೃತ” ಪುಸ್ತಕವು ದಿನಾಂಕ ೧೮-೧-೨೦೨೨ರಂದು ಮಂಗಳವಾರ ಲೋಕಾರ್ಪಣೆಗೊಂಡಿತು.
ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಅವರು ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಪ್ರೋ. ಎಚ್.ಟಿ. ಪೋತೆಯವರು ಗ್ರಂಥ ಲೋಕಾರ್ಪಣೆ ಮಾಡಿದರು.
ಡಾ. ಶಿವರಾಜ ಶಾಸ್ತ್ರಿ ಯವರು ರಚಿಸಿರುವ ’ಗೀಗೀಪದಾಮೃತ’ ಎಂಬ ಪುಸ್ತಕವು ಅನೇಕ ಶ್ರೇಷ್ಠ ಮಟ್ಟದ ಮೌಲ್ಯಗಳಿಂದ ಕೂಡಿದ್ದು, ಶರಣಬಸವೇಶ್ವರ ಮಹಾದಾಸೋಹ ಯಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜರುಗುವ ಮೂರು ದಿನಗಳ ಗೀಗೀ ಸಮ್ಮೇಳನದಲ್ಲಿ ಖ್ಯಾತ ಗೀಗೀ ಪದ ಕಲಾವಿದರು ಹಾಡಿರುವ ಶಿವಶರಣರ/ಶಿವಶರಣೆಯರ ಸಂತ ಮಹಾತ್ಮರ ಭಕ್ತಿ ಭರಿತ ಪಾವನ ಚರಿತ್ರೆಗಳನ್ನು ಸಂಗ್ರಹಿಸಿ, ವಿಶ್ಲೇಷಿಸಿ ಹಾಗೂ ವ್ಯಾಖ್ಯಾನಿಸಿ ಡಾ. ಶಾಸ್ತ್ರಿ ಅವರು ಅಮೂಲ್ಯ ಕೃತಿ ರಚಿಸಿರುವರು. ಇದೊಂದು ವಿಶೇಷ ಪುಸ್ತಕವಾಗಿದ್ದು ಹೊಸಗನ್ನಡ ಸಾಹಿತ್ಯ ಲೋಕಕ್ಕೆ ಈ ಕೃತಿ ೨೦೨೨ನೇ ಸಾಲಿನ ಪ್ರಥಮ ತಿಂಗಳಿನಲ್ಲಿಯೇ ಲೋಕಾರ್ಪಣೆಯಾಗುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ.
ಈ ಸಮಾರಂಭದಲ್ಲಿ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಸುರೇಶಕುಮಾರ ನಂದಗಾಂವ ಹಾಗೂ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಪ್ರೊ. ಕ್ಷೇಮಲಿಂಗ ಬಿರಾದಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಲೇಖಕರ ಹೆಜ್ಜೆ ಗುರುತುಗಳು ಒಂದು ಅವಲೋಕನ ಎಂಬ ವಿಷಯದ ಕುರಿತು ಕಲಬುರಗಿಯ ಸರಕಾರಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ. ಕಲ್ಯಾಣರಾವ ಪಾಟೀಲ ಅವರು ಮಾತನಾಡಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಶರಣಬಸವಪ್ಪ ನದಿ ಸಿಣ್ಣೂರ ಮತ್ತು ತಂಡದವರಿಂದ ಗೀಗೀ ಪದದ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…