ಶಹಾಬಾದ :ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದೇ ಜನೇವರಿ ೨೧ ರಂದು ಆಚರಿಸಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದೆವೆ ಎಂದು ತಾಲೂಕಾ ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.
ಅಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕೋವಿಡ್ ನಿಯಮಾವಳಿಯನ್ನು ಪಾಲಿಸಿಕೊಂಡು ಸರಳವಾಗಿ ಆಚರಿಸಬೇಕು.ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳಬೇಕು.ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜಯಂತಿಯನ್ನು ಆಚರಿಸಬೇಕೆಂದು ತಿಳಿಸಿದ್ದಾರೆ.