ಸುರಪುರ: ಜನೆವರಿ ೨೬ ರಂದು ಗಣರಾಜ್ಯೋತ್ಸವದ ಅಂಗವಾಗಿ ನಗರದ ತಹಸೀಲ್ ಕಚೇರಿಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ,ರಾಜ್ಯದಲ್ಲಿ ಕೊರೊನಾ ಸೊಂಕು ದಿನೆ ದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಈಬಾರಿಯ ಜನೆವರಿ ೨೬ ರಂದು ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಅಂದು ಬೆಳಿಗ್ಗೆ ೮ ಗಂಟೆಯ ಒಳಗಾಗಿ ತಾಲೂಕಿನ ಎಲ್ಲಾ ಶಾಲಾ ಕಾಲೇಜು ಸರಕಾರಿ ಕಚೇರಿಗಳಲ್ಲಿ ಮತ್ತು ಪಂಚಾಯತಿ ಕಾರ್ಯಾಲಯಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ಮಾಡುವ ಮೂಲಕ ಸರಳವಾಗಿ ಆಚರಣೆ ಮಾಡಬೇಕು.ಮತ್ತು ೯ ಗಂಟೆಗೆ ತಹಸೀಲ್ ಕಚೇರಿಯಲ್ಲಿ ಆವರಣದಲ್ಲಿ ತಾಲೂಕು ಆಡಳಿತದಿಂದ ಧ್ವಜಾರೋಹಣ ನಡೆಯಲಿದ್ದು ಶಾಸಕರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುವಂತೆ ತಿಳಿಸಿದರು.ಅಲ್ಲದೆ ಎಲ್ಲಾ ಮಹಾ ನಾಯಕರ ವೃತ್ತಗಳಲ್ಲಿ ಸ್ವಚ್ಚಗೊಳಿಸಿ ಅಲಂಕರಿಸುವಂತೆ ನಗರಸಭೆಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಇಒ ಮಹಾದೇವರಡ್ಡಿ ವೇದಿಕೆ ಮೇಲಿದ್ದರು.ಸಭೆಯಲ್ಲಿ ಮುಖಂಡರಾದ ವೆಂಕಟೇಶ ಬೇಟೆಗಾರ,ಭಂಡಾರೆಪ್ಪ ನಾಟೆಕಾರ್ ಹಾಗು ಅಧಿಕಾರಿಗಳಾದ ಅಕ್ಷರದಾಸೋಹ ಎಡಿ ಮೌನೇಶ ಕಂಬಾರ,ತಾ.ಪಂ ವ್ಯವಸ್ಥಾಪಕ ವೆಂಕೋಬ ಬಾಕಲಿ,ನಗರಸಭೆಯ ಶಿವಪುತ್ರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…