ಕಲಬುರಗಿ: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಒಂದಾದ ಪಿಡಿಎ ಇಂಜಿನಿಯರಿಂಗ್ ಕಾಲೇಜ್ ಆಡಳಿತ ಮಂಡಳಿಯ ವಿರುದ್ಧ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದಾರೆ.
ಗುರುವಾರ ಪಿಡಿಎ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ಶುಲ್ಕ ಮತ್ತು ಮರುಮೌಲ್ಯಮಾಪನ ಶುಲ್ಕ ಹೆಚ್ಚಳ ಮಾಡಿದಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸಿದರು.
ಆಡಳಿತ ಮಂಡಳಿಯ ಕಟ್ಟಡದ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ಆದೇಶ ವಾಪಸ್ ಪಡೆಯಬೇಕೆಂದು ನೂರಾರು ವಿದ್ಯಾರ್ಥಿಗಳು ಪಟ್ಟುಹಿಡಿದು ಪ್ರತಿಭಟನೆ ನಡೆಸಿದರು.