ಬಿಸಿ ಬಿಸಿ ಸುದ್ದಿ

ಸಕ್ಕರೆ ಕಾರ್ಖಾನೆಯ ಮತ್ತೊಂದು ಎಡವಟ್ಟು: ಸಂಬಂದವೇ ಇಲ್ಲದ ನೂರಾರು ಜನರಿಗೆ ಸಾಲ

ಬೆಳಗಾವಿ: ರಾಜ್ಯದಲ್ಲಿ ಕೊರೊನಾ, ಓಮಿಕ್ರಾನ್ ಹಾವಳಿ ಹೆಚ್ಚಾಗಿದ್ದು ಸರಕಾರ ವಿಕ್ ಎಂಡ್ ಲಾಕ್ ಡೌನ್ ಸೇರಿ ಅನೇಕ ನಿರ್ಬಂಧಗಳನ್ನು ಹೇರಿದೆ. ಇದರಿಂದ ದುಡಿಯುವ ವರ್ಗಕ್ಕೆ ದೊಡ್ಡ ಪೆಟ್ಟು ಬಿದ್ದು ದಿನ ನಿತ್ಯ ಹೊಟ್ಟೆ ತುಂಬಿಸಿಕೊಳ್ಳುವುದು ಕಷ್ಟಕರವಾಗಿದೆ.

ಇಂತಹ ಸಂದರ್ಭದಲ್ಲಿ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ (Malaprabha Sahakari Sugar Factory) ಯಡವಟ್ಟು ಮಾಡಿದ್ದು, ಬಡವರಿಗೆ ಸಂಕಷ್ಟಕ್ಕೆ ತಳ್ಳಿದೆ. ಎಂ ಕೆ ಹುಬ್ಬಳ್ಳಿ ಪಟ್ಟಣದ ನೂರಾರು ಬಡವರ ಹೆಸರಿನಲ್ಲಿ ಕೊಟ್ಯಾಂತರ ರೂಪಾಯಿ ಸಾಲ (debt) ಮಾಡಿದೆ. ಕಾರ್ಖಾನೆಗೆ ಯಾವುದೇ ರೀತಿಯ ಸಂಬಂಧ ಇಲ್ಲವರಿಗೆ ವಿಮೆ, ಸಹಾಯದ ಧನದ ಹೆಸರಿನಲ್ಲಿ ದಾಖಲೆ ಪಡೆದು ಬ್ಯಾಂಕ್ ಆಫ್ ಇಂಡಿಯಾದಲ್ಲಿ (Bank Of india) ಸಾಲ ಮಾಡಿದೆ.

ಈಗ ಈ ವಿಚಾರ ಜನರಿಗೆ ಗೊತ್ತಾಗಿದ್ದು, ಬ್ಯಾಂಕ್ ನವರಿಗೆ ಈ ಬಗ್ಗೆ ಸಮರ್ಪಕ ಉತ್ತರ ನೀಡುತ್ತಿಲ್ಲ. ಕಾರ್ಖಾನೆ ಇದಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಿದೆ. ಇದು ನೂರಾರು ಬಡವರಿಗೆ ದೊಡ್ಡ ಸಂಕಷ್ಟವನ್ನು ತಂದೊಡ್ಡಿದೆ. ಒಪ್ಪತ್ತಿನ ಊಟಕ್ಕೆ ಪರದಾಡೋ ಜನರ ತಲೆ ಮೇಲೆ ಇದೀಗ ಬ್ಯಾಂಕ್ ನಲ್ಲಿ ಲಕ್ಷಗಟ್ಟಲೇ ಸಾಲ ಇದ್ದು ಜನರು ಕಂಗಾಲಾಗಿದ್ದಾರೆ.

ಬೆಳಗಾವಿ ಎಂ ಕೆ ಹುಬ್ಬಳ್ಳಿಯ ಬಳಿ ಇರೋ ಮಲಪ್ರಭಾ ಸಕ್ಕರೆ ಕಾರ್ಖಾನೆ ಇತ್ತೀಚಿಗೆ ಹಲವು ವಿವಾದಗಳಿಂದ ಸುದ್ದಿಯಲ್ಲಿ ಇದೆ. ಬಾಕಿ ಹಣ, ಸಕ್ಕರೆ ಗೋಲಮಾಲ್ ಬಗ್ಗೆ ದೊಡ್ಡ ವಿವಾದ ಸೃಷ್ಠಿಯಾಗಿತ್ತು. ಇದೀಗ ಕಾರ್ಖಾನೆ ಆಡಳಿತ ಮಂಡಳಿ ಸಂಬಂಧವೇ ಇಲ್ಲದ ಬಡವರ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿದೆ. ಎಂ ಕೆ ಹುಬ್ಬಳ್ಳಿ ಪಟ್ಟಣದ 160 ದಲಿತ ಹೆಸರಿನಲ್ಲಿ ಬರೋಬ್ಬರಿ 15 ಕೋಟಿ ರೂಪಾಯಿ ಸಾಲ ಮಾಡಿದೆ.

ಒಬ್ಬರ ಹೆಸರಿನಲ್ಲಿ 8 ಲಕ್ಷ ಸಾಲವನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಸಾಲ ತೆಗೆಯಲಾಗಿದೆ. ಆದರೇ ಬಗ್ಗೆ ಅಮಾಯಕ ಜನರಿಗೆ ಯಾವುದೇ ಮಾಹಿತಿಯನ್ನು ಕಾರ್ಖಾನೆ ನೀಡಿಲ್ಲ. ಸದ್ಯ 8 ಲಕ್ಷ ಹಣಕ್ಕೆ 25 ಸಾವಿರ ರೂಪಾಯಿ ಬಡ್ಡಿ ಸಹ ಸೇರ್ಪಡೆಯಾಗಿದ್ದು, ಇದಕ್ಕೆ ಯಾರು ಜವಾಬ್ದಾರಿ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಎಂ ಕೆ ಹುಬ್ಬಳ್ಳಿ ಪಟ್ಟಣದ ಜನರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಬಂದು ಧರಣಿ ಮಾಡಿದ್ದಾರೆ. ಈ ಬಗ್ಗೆ ಬ್ಯಾಂಕ್ ನಲ್ಲಿಯೂ ಧರಣಿ ಮಾಡಿದ್ದು, ಸಿಬ್ಬಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 160 ಜನರ ಪೈಕಿ ಓರ್ವರು ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ 25 ಸಾವಿರ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ವೇಳೆಯಲ್ಲಿ ಬ್ಯಾಂಕ್ ಸಿಬ್ಬಂದಿಗೆ ಗ್ರಾಹಕರಿಗೆ ನಿಮ್ಮ ಹೆಸರಿನಲ್ಲಿ ಒಂದು ಲೋನ್ ಇದೆ ಮತ್ತೊಂದು ಸಾಲವನ್ನು ಕೊಡಲ್ಲ ಎಂದು ಹೇಳಿತ್ತು.

ಈ ಬಗ್ಗೆ ವಿಚಾರ ನಡೆಸಿದ ವೇಳೆಯಲ್ಲಿ 8 ಸಾಲವನ್ನು ಸಕ್ಕರೆ ಕಾರ್ಖಾನೆ ಮಾಡಿರೋದು ಬೆಳಕಿಗೆ ಬಂದಿದೆ. ರೈತ ಮುಖಂಡೆ ಜಯಶ್ರೀ ಗುರಣ್ಣವರ್ ಈ ಬಗ್ಗೆ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಒಂದು ವಾರದಲ್ಲಿ ಸಮಸ್ಯೆ ಇತ್ಯರ್ಥ ಪಡಿಸಬೇಕು ಇಲ್ಲವೇ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಮುಖಂಡರು ನೀಡಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

24 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago