ಡಾ.ಮುಮ್ತಾಜ ಬೇಗಂ ಪುಸ್ತಕಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0
20

ಕಲಬುರಗಿ: ಗುಲ್ಬರ್ಗ ವಿಶ್ವ ವಿದ್ಯಾಲಯ ಇಂದು ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೊಪ್ಪಳ‌ ಜಿಲ್ಲೆಯ ಗಂಗಾವತಿಯ ಎಸಕೆಎನಜಿ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಮುಮ್ತಾಜ್ ಬೇಗಂ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಲೇಖಕಿ ಡಾ. ಮುಮ್ತಾಜ್ ಬೇಗಂ ಅವರು ಬರೆದ ಜಾನಪದ ಸಾಹಿತ್ಯದಲ್ಲಿ ಮೌಲ್ಯ ಪ್ರತಿಪಾದನೆ ಪುಸ್ತಕವೂ ಗುಲ್ಬರ್ಗ ವಿಶ್ವ ವಿದ್ಯಾಲಯ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಕನ್ನಡ ಲೇಖಕರಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಗುಲ್ಬರ್ಗ ವಿಶ್ವ ವಿದ್ಯಾಲಯದ ಪ್ರಸಾರಾಂಗ ವಿಭಾಗವು ಪ್ರತಿ ವರ್ಷವೂ ನಾಡಿನ ಲೇಖಕರನ್ನ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಹುರಿದುಂಬಿಸುವ ಕೆಲಸ ಮಾಡ್ತಿದೆ.

Contact Your\'s Advertisement; 9902492681

ಹೀಗಾಗಿ ಪ್ರಸಕ್ತ ವರ್ಷ ಡಾ.ಮುಮ್ತಾಜ್ ಬೇಗಂ ಅವರ ಜಾನಪದ ಸಾಹಿತ್ಯದಲ್ಲಿ ಮೌಲ್ಯ ಪ್ರತಿಪಾದನೆ ಪುಸ್ತಕವೂ ಪ್ರಶಸ್ತಿಗೆ ಆಯ್ಕೆಯಾಗಿದ್ದು ಜಿಲ್ಲೆಯ ಹೆಮ್ಮೆಯ ಸಂಗತಿ. ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲಾ ಪ್ರಶಸ್ತಿ ಪ್ರಧಾನ ಮಾಡಿದರು. ಗುಲ್ಬರ್ಗ ವಿವಿ ಕುಲಪತಿ ಪ್ರೊ. ದಯಾನಂದ ಅಗಸರ ಸಾಥ್ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here