ಅಂಬಿಗರ ಚೌಡಯ್ಯ ಸಾಮಾಜಿಕ ಚಿಂತನೆ’ ಕಾರ್ಯಕ್ರಮ

ಕಲಬುರಗಿ: ಇಂದಿನ ವಿದ್ಯಾರ್ಥಿಗಳು ಬೌದ್ಧಿಕ ವಿಕಸನಕ್ಕೆ ಹೆಚ್ಚಿನ ಮಹತ್ವ ನೀಡಬೇಕಿದೆ. ಹನ್ನೇರಡನೆಯ ಶತಮಾನದ ಬಸವಾದಿ ಶರಣರ ವಚನಗಳನ್ನು ಅಧ್ಯಯನ ಮಾಡುವದರೊಂದಿಗೆ ವಚನಗಳಲ್ಲಿನ ತಿರುಳನ್ನು ಅರ್ಥೈಸಿಕೊಂಡಲ್ಲಿ ಬೌದ್ಧಿಕ ವಿಕಸನಕ್ಕೆ ಸಹಕಾರಿಯಾಗಲಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಆದರ್ಶ ಶಿಕ್ಷಕಿ ಲಿಂ.ಸಿದ್ಧಮ್ಮಾ ಶಿವಾನಂದ ಮಠಪತಿ ಸ್ಮರಣಾರ್ಥ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಸಹಯೋಗದೊಂದಿಗೆ ಕಾಲೇಜಿನ ಪ್ರಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ‘ಅಂಬಿಗರ ಚೌಡಯ್ಯ ಸಾಮಾಜಿಕ ಚಿಂತನೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳ ಕೊರತೆ ಕಂಡು ಬರುತ್ತಿದೆ. ಅಕ್ಷರಸ್ತರ ಸಂಖ್ಯೆ ಅಧಿಕಗೊಂಡಿದ್ದರೂ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿವೆ. ವಿದ್ಯಾರ್ಥಿಗಳಲ್ಲಿ ಮಾನವೀಯತೆ ಮೌಲ್ಯಯುತ ಶಿಕ್ಷಣದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಸಾಪ  ದ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ತೇಗಲತಿಪ್ಪಿ, ಜಾತಿ, ದರ್ಮಗಳ ನಡುವಿನ ಜಂಜಾಟ ಮುಂದುವರಿದಿದ್ದು, ವಚನಗಳ ಸಾರವನ್ನು ಎಲ್ಲಡೆ ಸಾರುವ ಮೂಲಕ ಸಮಾನತೆಯನ್ನು ಪ್ರತಿಪಾದಿಸಬೇಕಿದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ಇತಿಹಾಸಕ ಪ್ರಾಧ್ಯಾಪಕಿ ಡಾ.ಇಂದುಮತಿ ಪಾಟೀಲ, ಮನುಷ್ಯ ಭೂಮಿಗೆ ಬರುವಾಗ ಜಾತಿ, ದರ್ಮ, ಬೇಧ-ಭಾವಗಳಿಲ್ಲದೇ ಬರುತ್ತಾನೆ. ಆದರೆ ಭೂಮಿಗೆ ಬಂದಾದ ಮೇಲೆ ಜಾತಿಯ ಮೇಲು-ಕೀಳು ಎಂಬ ಭಾವನೆ ಮೈಗೂಡಿಸಿಕೊಳ್ಳುತ್ತಾನೆ. ಇಂಥ ವ್ಯವಸ್ಥೆಯನ್ನು ಧಿಕ್ಕರಿಸಿಯೇ ನಿಜಶರಣ ಅಂಬಿಗರ ಚೌಡಯ್ಯನವರು ಜಾತಿ, ಮೇಲು-ಕೀಳು ಎನ್ನದೇ ಸರ್ವರನ್ನು ಸಮಾನವಾಗಿ ಕಂಡ ಕಲ್ಯಾಣದ ಅನುಭವ ಮಂಟಪದ ಬಸವಣ್ಣನವರ ಅನುಯಾಯಿಯಾಗಿ ಶಕರ ಸಂಕುಲನತೆಗೆ ಹೋರಾಡಿದರು ಎಂದು ವಿಶ್ಲೇಷಿಸಿದರು. ಸಾಮಾಜಿಕ ಸಮಾನತೆಗಾಗಿ ವಚನಗಳ ಮೂಲಕ ಕ್ರಾಂತಿ ನಡೆಸಿದ ಮಹಾನ್ ವಚನಕಾರರ ಪೈಕಿ ನಿಜಶರಣ ಅಂಬಿಗರ ಚೌಡಯ್ಯ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿರಾದಾರ ಕಾಶಿನಾಥ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಶಿವಾನಂದ ಮಠಪತಿ, ಡಾ.ಪದ್ಮಾರಾಜ ರಾಸಣಗಿ, ಪ್ರೊ.ಮೀನಾಕ್ಷಿ ವಿಜಯಕುಮಾರ, ಶ್ರೀಕಾಂತ ಪಾಟೀಲ ತಿಳಗೂಳ, ರಾಜೇಂದ್ರ ತೆಗನೂರ, ಸೋಮಶೇಖರ ನಂದಿಧ್ವಜ, ಡಾ.ಶೈಲಜಾ ಕೊಪ್ಪರ, ಡಾ.ಅರುಣೀತಾ ಆಲಮೇಲಕರ್, ಡಾ.ಶಶಿಶೇಖರ ರೆಡ್ಡಿ, ಡಾ.ಬಳಗಾರ ಜ್ಯೋತಿ, ಪ್ರೊ.ಜ್ಯೋತಿ ರೆಡ್ಡಿ, ಡಾ.ರೂಪಾಲಿ ರಾಠೋಡ, ಡಾ. ಪ್ರಿಯಾದರ್ಶಿನಿ, ಡಾ.ಮಲ್ಲಿಕಾರ್ಜುನ ಶೆಟ್ಟಿ, ಡಾ.ಹಾಜಿಬೇಗಂ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420