ಸುರಪುರ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗು ಸುರಪುರ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ.
ಈ ಕುರಿತು ಸ್ವತಃ ಶಾಸಕರೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು.ಕಳೆದ ಎರಡು ದಿನಗಳಿಂದ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು,ಆದರೆ ಕೊರೊನಾದ ಯಾವುದೇ ಲಕ್ಷ್ಮಣಗಳಿರಲಿಲ್ಲ,ಈಗ ಪರೀಕ್ಷೆ ಮಾಡಿಸಲಾಗಿದ್ದು ಸೊಂಕು ತಗುಲಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಆದರೆ ಯಾವುದೇ ರೀತಿಯ ಲಕ್ಷಣಗಳಾಗಲಿ,ಆರೋಗ್ಯದಲ್ಲಿ ಸಮಸ್ಯೆಯಾಗಲಿ ಇಲ್ಲ.ವೈದ್ಯರು ಒಂದು ವಾರಗಳ ಕಾಲ ಮನೆಯಲ್ಲಿಯೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ.
ಆದ್ದರಿಂದ ವಿಶ್ರಾಂತಿಯಲ್ಲಿರುವೆನು.ನಮ್ಮ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರು ಆತಂಕಪಡುವ ಅಗತ್ಯವಿಲ್ಲ ಆದಷ್ಟು ಶೀಘ್ರದಲ್ಲಿ ಮತ್ತೆ ನಿಮ್ಮೆಲ್ಲರ ಸೇವೆಯಲ್ಲಿ ತೊಡಗುವೆ.ಈಗ ಸಾರ್ವಜನಿಕರು ಏನೆ ಕೆಲಸಗಳಿದ್ದಲ್ಲಿ ನಮ್ಮ ಆಪ್ತ ಸಹಾಯಕರನ್ನು ಭೇಟಿ ಮಾಡುವಂತೆ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…