ನಾಳೆ ವಿಶೇಷ ಉಪನ್ಯಾಸ, ಸತ್ಕಾರ, ರಕ್ತದಾನ ಶಿಬಿರ

0
24

ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ. ಸಂಶೋಧನಾ ಪರಿಷತ್ ವತಿಯಿಂದ ಭಾನುವಾರ ಬೆಳಗ್ಗೆ 10.30ಕ್ಕೆ ನಗರದ ಶರಣಸಿರಸಗಿ ಹೊರ ವಲಯದಲ್ಲಿರುವ ಬಸವ ಭೂಮಿಯಲ್ಲಿ ವಿಶೇಷ ಉಪನ್ಯಾಸ, ಗೌರವ ಸತ್ಕಾರ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ್ ಸತ್ಯಂಪೇಟೆ ತಿಳಿಸಿದ್ದಾರೆ.

ಮಾಜಿ ಸಚಿವ ಎಸ್.ಕೆ. ಕಾಂತಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪಿಡಿಎ ಎಂಜಿನಿಯರಿಂಗ್ ಕಾಲೇಜು ಸಹ ಪ್ರಾಧ್ಯಾಪಕ ಪ್ರೊ. ಸಂಜಯ ಮಾಕಲ್ ‘ ವಚನಗಳಲ್ಲಿ ವೈಜ್ಞಾನಿಕತೆ’ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

Contact Your\'s Advertisement; 9902492681

ಜಾಗತಿಕ ಲಿಂಗಾಯತ ಮಹಾಸಭಾದ ಕಲಬುರಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯ ನಿರ್ದೇಶಕ ಶರಣ ಬಸವ ಕಲ್ಲಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪರಿಷತ್ ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ ವಹಿಸಲಿದ್ದಾರೆ.

ಇದೇವೇಳೆಯಲ್ಲಿ ಭಾರತೀಯ ರೆಡ್ ಕ್ರಾಸ್ ಕಲಬುರಗಿ ಸಭಾಪತಿ ಅಪ್ಪಾರಾವ ಅಕ್ಕೋಣೆ, ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ, ಶರಣ ಸಾಹಿತ್ಯ. ಪರಿಷತ್ ಜಿಲ್ಲಾಧ್ಯಕ್ಷ ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ಆರ್ ಪಿಐ ಚನ್ನಬಸವ ಬಾಲಪಗೋಳ್, ಪತ್ರಕರ್ತ ಕುಮಾರ ಬುರಡಿಕಟ್ಟಿ, ಸುಮೇಧ ಪ್ರಕಾಶನದ ಡಾ. ದತ್ತಾತ್ರಯ ಇಕ್ಕಳಕಿ ಅವರನ್ನು ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here