ಬೆಂಗಳೂರು: 1971 ರ ಯುದ್ದದಲ್ಲಿ ಹುತಾತ್ಮರಾದ ಯೋಧರ ನೆನೆಪಿಗೆ ಇಂಡಿಯಾ ಗೇಟ್ನಲ್ಲಿ ಹಚ್ಚಲಾದ ಅಮರ ಜವಾನ್ ಜ್ಯೋತಿಯನ್ನು ವಿಲೀನಗೊಳಿಸಿರುವುದು ಹುತಾತ್ಮರಿಗೆ ಮಾಡಿದ ಅಗೌರವ ಎಂದು ಮಾಜಿ ಸಂಸದರು ಹಾಗೂ ಹಾಲಿ ವಿಧಾನಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಳೆದ 50 ವರ್ಷಗಳಿಂದ ಈ ಜ್ಯೋತಿ ನಮ್ಮ ದೇಶಕ್ಕಾಗಿ ಹುತಾತ್ಮರಾದ ಯೋಧರ ಸ್ಮರಣೆಯ ಪ್ರತೀಕವಾಗಿತ್ತು. ಅಮರ ಜವಾನ್ ಜ್ಯೋತಿಯ ಶಾಶ್ವತ ಜ್ಯೋತಿ ನಮ್ಮ ದೇಶಭಕ್ತಿಯ ಹಾಗೂ ದೇಶಪ್ರೇಮದ ಸಂಕೇತವಾಗಿ ಪ್ರಜ್ವಲಿಸುತ್ತಿತ್ತು. ಎರಡೂ ಜ್ಯೋತಿಗಳ ನಿರ್ವಹಣೆ ಕಷ್ಟ ಎನ್ನುವ ಹಿನ್ನಲೆಯಲ್ಲಿ ಯುದ್ದ ಸ್ಮಾರಕದಲ್ಲಿ ನಿರ್ಮಿಸಲಾಗಿರುವ ಜ್ಯೋತಿಯಲ್ಲಿ ವಿಲೀನಗೊಳಿಸಿರುವುದು ಸರಿಯಲ್ಲ.
1971 ರಲ್ಲಿ ಇಂದಿರಾ ಗಾಂಧಿಯವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಅಮರ ಜವಾನ್ ಜ್ಯೋತಿಯನ್ನು ಇಂಡಿಯಾ ಗೇಟ್ ನಲ್ಲಿ ಇರಿಸಲಾಗಿತ್ತು. ಆನಂತರ ಹಲವಾರು ಯುದ್ದಗಳಲ್ಲಿ ತಮ್ಮ ಪ್ರಾಣವನ್ನು ದೇಶಕ್ಕಾಗಿ ನೀಡಿದ ಹಲವಾರು ಧೀರ ಯೋಧರ ನೆನಪೂ ಕೂಡಾ ಇದರಲ್ಲೇ ಸಮ್ಮಿಳತವಾಗಿತ್ತು. ಈಗ ಮೋದಿ ನೇತೃತ್ವದ ಸರಕಾರ ಇದನ್ನು ಯುದ್ದ ಸ್ಮಾರಕದಲ್ಲಿ ವಿಲೀನಗೊಳಿಸುವ ನಿರ್ಧಾರ ಕೈಗೊಳ್ಳುವ ಮೂಲಕ ಹುತಾತ್ಮರಿಗೆ ಅವಮಾನ ಮಾಡಿದೆ. ಇಂತಹ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ನಮ್ಮ ಇತಿಹಾಸವನ್ನು ತಿರುಚುವಂತಹ ಕಾರ್ಯಕ್ಕೆ ಕೇಂದ್ರ ಸರಕಾರ ಕೈ ಹಾಕಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…