ಕಲಬುರಗಿ: ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಳೆದ ಎರಡು ವಾರದಿಂದ ವಿಕೆಂಡ್ ಕರ್ಫ್ಯೂ ವಿಧಿಸಿದ್ದು, ನಿನ್ನೆ ರಾಜ್ಯ ಸರಕಾರ ವಿಕೆಂಡ್ ಕರ್ಫ್ಯೂ ರದ್ದು ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದ ಸುಪರ್ ಮಾರ್ಕೆಟ್ ನಗರದಲ್ಲಿ ಎಂದಿನಂತೆ ವ್ಯಾಪಾರಿಗಳು, ವಾಣಿಜ್ಯ ಮಳಿಗೆಗಳು ಕಾರ್ಯಾನಿರ್ವಹಿಸುತ್ತಿರುವ ದೃಶ್ಯ ಕಂಡುಬಂತು.