ಕಲಬುರಗಿ: ಗ್ರಾಮೀಣ ಸೊಗಡನ್ನು ಮೇಳೈಸಿಕೊಂಡಿರುವ ಜನಪದ ಕಲೆಗಳು ಉಳಿದಾಗ ಮಾತ್ರ ನಮ್ಮ ಸಂಸ್ಕೃತಿ ಮತ್ತು ಪರಂಪರೆ ಉಳಿಯುತ್ತದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ಬಿ.ನಾಯಕ ಅಭಿಪ್ರಾಯಪಟ್ಟರು.
ಕಲಬುರಗಿಯ ಕನ್ನಡ ಭವನಕ್ಕೆ ಶನಿವಾರ ಭೆಟ್ಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡಿದ ಗೌರವ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಮೂಲ ಸಂಸ್ಕೃತಿಯನ್ನು ಬಿಂಬಿಸುವ ಜನಪದ ಕಲಾ ಸಂಪತ್ತನ್ನು ಉಳಿಸಿ, ಬೆಳೆಸುವ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಇಂದಿನ ಯುವ ಜನಾಂಗಕ್ಕೆ ಜಾನಪದ ಸಾಹಿತ್ಯದ ಬಗ್ಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ. ಜನಪದ ಉಳಿದರೆ ದೇಶದ ಸಂಸ್ಕೃತಿ ಉಳಿಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಾನಪದ ಕಲೆಗಳಿಗೆ ಪ್ರೋತ್ಸಾಹಿಸುವ ದಿಸೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಜನಪದದಲ್ಲಿ ಗ್ರಾಮೀಣ ಸಂಸ್ಕೃತಿಯ ಸೊಗಡು ಇದೆ. ವಿವಿಧ ಜಾನಪದ ಕಲೆ ಹಾಗೂ ಸಾಹಿತ್ಯ ರಕ್ಷಣೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮುಂದಿನ ದಿನಗಳಲ್ಲಿ ನಿರಂತರವಾಗಿ ಶ್ರಮಿಸುತ್ತದೆ ಎಂದರು.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್.ಅಂಡಗಿ, ಕೋಶಾಧ್ಯಕ್ಷ ಡಾ.ಶರಣರಾಜ್ ಛಪ್ಪರಬಂದಿ, ಪ್ರೊ.ಯಶವಂತರಾವ ಅಷ್ಟಗಿ, ಸಾಹಿತಿಗಳಾದ ಪ.ಮಾನು ಸಗರ, ಡಾ.ಚಿ.ಸಿ.ನಿಂಗಣ್ಣ, ಶಕುಂತಲಾ ಪಾಟೀಲ, ಧರ್ಮಣ್ಣ ಧನ್ನಿ, ಪ್ರಮುಖರಾದ ವೆಂಕಟೇಶ ನೀರಡಗಿ, ಬಿ.ಎಸ್.ಮಾಲಿಪಾಟೀಲ, ಶಿವಾನಂದ ಮಠಪತಿ, ಸಿದ್ಧಾರಾಮ ಹಂಚನಾಳ, ರಾಜೇಂದ್ರ ತೆಗನೂರ, ಜಗದೀಶ ಮರಪಳ್ಳಿ, ಪ್ರಭುಲಿಂಗ ಮೂಲಗೆ, ಶ್ರೀಕಾಂತ ಪಾಟೀಲ ತಿಳಗೂಳ, ಕಲ್ಯಾಣಕುಮಾರ ಶೀಲವಂತ ಇತರರು ಉಪಸ್ಥತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…