ಶಹಾಪುರ: ಪ್ರಜಾಪ್ರಭುತ್ವದ ವ್ಯವಸ್ಥೆ ಸರಿಯಾಗಬೇಕಾದರೆ ಮಾಧ್ಯಮಗಳು ಅತ್ಯಂತ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ ಅದರ ಪೂರ್ವಕವಾಗಿ ಪತ್ರಕರ್ತರು ಶ್ರದ್ಧೆ ಮತ್ತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಆದ್ದರಿಂದ ಪತ್ರಕರ್ತರ ಸೇವೆ ಶ್ಲಾಘನೀಯವಾದದ್ದು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ಶಹಾಪುರ ನಗರದ ಜಯಾ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಮುಂಬರುವ ದಿನಗಳಲ್ಲಿ ಶಹಾಪುರ ತಾಲೂಕಿನಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕಾಗಿ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಉಪನ್ಯಾಸಕರಾಗಿ ಆಗಮಿಸಿದ ಶಹಾಪುರದ ಏಕದಂಡಗಿ ಮಠದ ಅಜೇಂದ್ರ ಮಹಾಸ್ವಾಮಿಗಳು ಇಂದಿನ ಪತ್ರಿಕೆಗಳ ವಾಸ್ತವ ಸ್ಥಿತಿಗತಿಗಳ ಕುರಿತು ಸುದೀರ್ಘವಾಗಿ ಮಾತನಾಡಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಕಾನೂನು ವಿರೋಧಿ ಕೃತ್ಯಗಳನ್ನು ಬಯಲಿಗೆಳೆದು ತಂದು ಬಿತ್ತರಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಪತ್ರಕರ್ತರದು ಎಂದು ಹೇಳಿದರು.
ಈ ಸಮಾರಂಭದ ವೇದಿಕೆಯ ಮೇಲೆ ಚರಬಸವೇಶ್ವರ ಗದ್ದುಗೆ ಸಂಸ್ಥಾನದ ಶ್ರೀಗಳಾದ ಪರಮಪೂಜ್ಯ ಬಸವಯ್ಯ ಶರಣರು ದಿವ್ಯ ಸಾನ್ನಿಧ್ಯ ವಹಿಸಿಕೊಂಡಿದ್ದರು, ಮುಖ್ಯ ಅತಿಥಿಗಳಾಗಿ ಹಿರಿಯ ಮುಖಂಡರಾದ ಚಂದ್ರಶೇಖರ ಸಾಹು ಆರಬೋಳ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಬಿ, ಎಂ, ಜಗದೀಶ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ನಾರಾಯಣ ಆಚಾರ್ಯ ಸಗರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಮಾರಂಭದಲ್ಲಿ ಸಮಾಜದ ವಿವಿಧ ರಂಗಗಳಲ್ಲಿ ಸಾಧನೆಗೈದ ಸಾಧಕರಾದ ಚಂದ್ರಕಾಂತ ಕರದಳ್ಳಿ, ಸಿದ್ದಲಿಂಗಣ್ಣ ಆನೆಗುಂದಿ,ರಘುನಾಥ್ ರಾವ್ ತಿಳಗೂಳ,ನೀಲಕಂಠ ಕಡಗಂಚಿ, ಇರ್ಫಾನ್ ಪಠಾಣ್, ಇತರರನ್ನು ವಿಶೇಷವಾಗಿ ಸನ್ಮಾನಿಸಿ ಸತ್ಕರಿಸಲಾಯಿತು. ಜೊತೆಗೆ ಪತ್ರಿಕಾ ವಿತರಕರಗೂ ಕೂಡ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಪೂರ್ವದಲ್ಲಿ ಶ್ಯಾಮಲಾ ಮತ್ತು ಶ್ರೀದೇವಿ ಪ್ರಾರ್ಥನಾಗೀತೆ ಹಾಡಿದರು ಚಂದ್ರಶೇಖರ್ ಗೋಗಿ ಹಾಗೂ ಚನ್ನಪ್ಪ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿದವು ನಾಗೇಂದ್ರ ಸಿಂಗ್ ಠಾಕೂರ್ ಸ್ವಾಗತಿಸಿದರು,ಡಾ:ಶರಣು ಬಿ. ಗದ್ದುಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಬಸವರಾಜ ಸಿನ್ನೂರು ನಿರೂಪಿಸಿದರು, ವಿಶಾಲ್ ದೋರನಹಳ್ಳಿ ವಂದಿಸಿದರು.