ಸುರಪುರ: ಇಂದಿನ ಯುವಜನರು ಮತ್ತು ವಿದ್ಯಾರ್ಥಿಗಳು ಸರಕಾರಿ ನೌಕರಿಗಾಗಿಯೇ ಪ್ರಯತ್ನಿಸುವುದಕ್ಕಿಂತ ವಿಶೇಷ ಆಸಕ್ತಿಇರುವ ಕಲೆಗಳಲ್ಲಿ ತೊಡಗಿಸಿಕೊಂಡು ವೃತ್ತಿ ಕೌಶಲ್ಯ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ ಶರಣಗೌಡ ಪಾಟೀಲ್ ಜೈನಾಪುರ ಹೇಳಿದರು.
ನೆಹರು ಯುವ ಕೇಂದ್ರ ಕಲಬುರಗಿ, ಸಗರನಾಡು ಯುವಕಸಂಘ ಸಹಯೋಗದೊಂದಿಗೆ ರಂಗಂಪೇಟೆಯ ಬಸವಪ್ರಭು ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಇಂದು ಆಯೋಜಿಸಿದ್ದ ವೃತ್ತಿ ಕೌಶಲ್ಯ ಮಾರ್ಗದರ್ಶನ ಮತ್ತು ಆಪ್ತ ಸಲಹೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಇಂದಿನ ದಿನಮಾನಗಳಲ್ಲಿ ಅನೇಕ ಯುವಜನರು ನಿರೂದ್ಯೋಗ ಸಮಸ್ಯ ಎದರಿಸುತ್ತಿದ್ದು ಕೌಶಲ್ಯ ಅಭಿವೃದ್ಧಿ ಮೂಲಕ ಅನೇಕ ಯುವಕರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಯೋಜನೆಗಳು ರೂಪಗೊಳ್ಳುತ್ತಿದ್ದರು ಯುವಜನರ ನಿರಾಸಕ್ತಿ ಹೆಚ್ಚಾಗುತ್ತಿದೆ, ಅಲ್ಲದೆ ವೃತ್ತಿ ಕೌಶಲ್ಯದಲ್ಲಿಯು ಕೂಡ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸಕ ಬಲಭೀಮ ಪಾಟೀಲ್ ವ್ಯಕ್ತಿತ್ವ ವಿಕಸನ ಕುರಿತು, ಶ್ರೀಕಾಂತ ರತ್ತಾಳ ಕೋವಿಡ್-೧೯ ಜಾಗೃತಿ ಕುರಿತು, ರುದ್ರಪ್ಪ ಕೆಂಭಾವಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ನಂತರ ಮುಂದೇನು? ಎಂಬ ವಿಷಯಗಳ ಕುರಿತು ಮಾತನಾಡಿದರು. ಸಾಹಿತಿ ನಬಿಲಾಲ್ ಮಕಾಂದಾರ ಕಾರ್ಯಕ್ರಮ ಉದ್ಘಾಟಿಸಿದರು, ಯುವಕ ಸಂಘದ ಅಧ್ಯಕ್ಷ ಪ್ರಕಾಸ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಕೃಷ್ಟ ದೇವತ್ಕಲ್ ನಿರೂಪಿಸಿದರು, ಪ್ರವೀಣ ಜಕಾತಿ ಸ್ವಾಗತಿಸಿದರು, ಸಿದ್ದಪ್ರಸಾದ ವಂದಿಸಿದರು. ಕಾರ್ಯಗಾರದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳೀಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…