ಸುರಪುರ: ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿನ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವ ಹಿರಿಯ ಪ್ರಾಥಮಿಕ ಆಂಗ್ಲ ಮಾದ್ಯಮ ಶಾಲೆಯಲ್ಲಿ ತರಕಾರಿಗಳ ಮೇಳ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ, ಅದ್ಯಕ್ಷರು ಶರಣಬಸವೇಶ್ವರ ವಿದ್ಯಾವರ್ಧಕ ಸಂಘ(ರಿ) ಕಲಬುರ್ಗಿ, ಸಾನಿಧ್ಯ ಪೂಜ್ಯ ನೀಲಮ್ಮತಾಯಿ ವ್ಹಿ ನಿಷ್ಠಿ, ಉಪಾಧ್ಯಕ್ಷರು, ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಸುರಪುರ, ಶ್ರೀ ಶರಣಬಸವಪ್ಪ. ವ್ಹಿ ನಿಷ್ಠಿ ಕಾರ್ಯದರ್ಶಿಗಳು ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಸುರಪುರ, ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೊಡ್ಡಪ್ಪ. ಎಸ್. ನಿಷ್ಠಿ, ಜಂಟಿ ಕಾರ್ಯದರ್ಶಿಗಳು ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಸುರಪುರ, ಹಾಗೂ ಮುಖ್ಯ ಅತಿಥಿಗಳಾಗಿ ಡಾ. ಶರಣಬಸಪ್ಪ ಸಾಲಿ ಪ್ರಾಂಶುಪಾಲರು, ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಸುರಪುರ, ಪ್ರೋ. ನಾನಾಗೌಡ ದೇಸಾಯಿ ಪ್ರಾಂಶುಪಾಲರು, ಬಸವರಾಜಪ್ಪ ಅಪ್ಪಾ ಪದವಿ ವಾಣಿಜ್ಯ ಮಹಾವಿದ್ಯಾಲಯ, ಸುರಪುರ, ಡಾ. ಅನೀಲಕುಮಾರ ಪಾಟೀಲ ಪ್ರಾಂಶುಪಾಲರು, ಶರಣಬಸವ ಪದವಿ ಪೂರ್ವ ವಸತಿ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಸುರಪುರ ಶ್ರೀಮತಿ ರತ್ನಾ ಮುಖ್ಯ ಗುರುಗಳು, ಶರಣಬಸವ ಪಬ್ಲಿಕ್ ಸ್ಕೂಲ್, ಸುರಪುರ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಅಧ್ಯಕ್ಷರು ಹಾಗೂ ಅತಿಥಿಗಳು ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಅಧಕ್ಷತೆ ವಹಿಸಿದ್ದ ದೊಡ್ಡಪ್ಪ ಎಸ್ ನಿಷ್ಠಿ ಮಾತನಾಡಿ, ತರಕಾರಿ ಮೇಳದ ಮಹತ್ವ ಹಾಗೂ ಸಾವಯವ ಕೃಷಿ ಅಳವಡಿಕೆಯಿಂದ ಹೇಗೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದೆಂದು ಹೇಳುತ್ತಾ ಮುಂದಿನ ದಿನಗಳಲ್ಲಿ ನಮ್ಮ ಶಾಲಾ ಆವರಣದಲ್ಲಿ ಸಂಪೂರ್ಣವಾಗಿ ಸಾವಯವ ಕೃಷಿ ಪದ್ದತಿಯಲ್ಲಿ ತರಕಾರಿಗಳನ್ನು ಬೆಳೆಯಲಾಗುವುದು ಎಂದುರು.
ಕಾರ್ಯಕ್ರಮದಲ್ಲಿ ತರಕಾರಿ ಮೇಳದಲ್ಲಿ ಪ್ರತಿಯೊಬ್ಬ ವಿಧ್ಯಾರ್ಥಿ ಉತ್ಸಾಹದಿಂದ ಭಾಗವಹಿಸಿ ತರಕಾರಿಗಳಲ್ಲಿರುವ ಹಲವಾರು ಪೊಷಕಾಂಶಗಳು ಮತ್ತು ರೋಗನೀರೊಧಕ ಶಕ್ತಿಯನ್ನು ಹೆಚ್ಚುಸುವುದರ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ಕನ್ನಡ ಪಠ್ಯದಲ್ಲಿ ತರಕಾರಿ ಮೇಳದ ಬಗ್ಗೆ ಗದ್ಯ ಇರುವುದರಿಂದ ಇದು ಮಕ್ಕಳ ಪ್ರಾಯೋಗಿಕ ಕಲಿಕೆಗೆ ಹಾಗೂ ವಿಜ್ಞಾನ ಹಾಗೂ ಗಣಿತ ವಿಷಯಕ್ಕೂ ಮಕ್ಕಳಿಗೆ ಸಹಾಯಕವಾಗಿದೆ ಎಂದು ಹೇಳಿದರು. ಈ ಮೇಳದಿಂದ ಮಕ್ಕಳಲ್ಲಿ ದೈನಂದಿನ ವ್ಯವಹಾರ ಜ್ಞಾನ ಬೆಳೆಯಲು ಸಹಾಯಕವಾಗುತ್ತದೆ ಎಂದು ಹೇಳಿದರು.
ರಶ್ಮೀ ಹೀರೆಮಠ ನೀರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಪಾಲಕರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…