ಹಾವೇರಿ: ಹಾವೇರಿ ಜಿಲ್ಲೆಯ ನೇತಾಜಿ ನಗರದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಹ್ಯಾಂಡ್ ಗ್ರೆನೇಡನ್ನು ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಲಾಗಿದೆ. ನಗರದ ಹರೀಶ್ ಮೆಸ್ ಬಳಿ ಅನುಮಾನಾಸ್ಪದ ರೀತಿಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿ ಸಾಕಷ್ಟು ಆತಂಕ ಸೃಷ್ಟಿಸಿತ್ತು.
ವಿಷಯ ತಿಳಿದು ಹುಬ್ಬಳ್ಳಿಯ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಗ್ರೆನೇಡ್ನ್ನು ವಶಪಡಿಸಿಕೊಂಡಿತ್ತು. ಅಲ್ಲದೆ, ಆ ಸ್ಥಳದಲ್ಲಿ ಮತ್ತೆ ಎಲ್ಲೆಯಾದರೂ ಇಂತಹ ವಸ್ತುಗಳಿವೆಯೇ ಎಂದು ಪರಿಶೀಲನೆ ನಡೆಸಿದರು. ಆದರೆ, ಎಲ್ಲಿಯೂ ಪತ್ತೆಯಾಗಲಿಲ್ಲ. ಬಳಿಕ ವಶಕ್ಕೆ ಪಡೆದಿದ್ದ ಗ್ರೆನೇಡ್ ನ್ನು ನಗರದ ಹೊರವಲಯಕ್ಕೆ ಸಾಗಿಸಿ ಸ್ಫೋಟಗೊಳಿಸುವಲ್ಲಿ ಯಶಸ್ವಿಯಾದರು.
ಗುರುವಾರ ಸಂಜೆ ಖಾಲಿ ಜಾಗವನ್ನು ಸ್ವಚ್ಛಗೊಳಿಸುವ ಸಮಯದಲ್ಲಿ ಹಿಂದೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಳಕೆ ಮಾಡುತ್ತಿದ್ದ ಹ್ಯಾಂಡ್ ಗ್ರೆನೇಡ್ ರೀತಿಯ ವಸ್ತು ಪತ್ತೆಯಾಗಿತ್ತು. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…