ನೇತಾಜಿ ಸುಭಾಷ್ ಚಂದ್ರ ಬೋಸ್ ರ ಉಜ್ವಲ ರಾಪ್ಟ್ರ ಪ್ರೇಮ ಎಲ್ಲರಿಗೂ ಆದರ್ಶ: ಸಿಎಂ ಬಸವರಾಜ ಬೊಮ್ಮಾಯಿ

0
11

ಬೆಂಗಳೂರು: ನೇತಾಜಿ ಸಭಾಷ್ ಚಂದ್ರ ಬೋಸ್ ಅವರ ಆದರ್ಶ, ದೇಶಭಕ್ತಿ, ದೇಶಕ್ಕಾಗಿ ಮಾಡಿದ ತ್ಯಾಗ, ಎಲ್ಲರಿಗೂ  ಅದರ್ಶ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾಡಿದರು.
ಇಂದು ನಮ್ಮ ದೇಶಕ್ಕೆ ಹೆಮ್ಮೆಯ ದಿನ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ವಿರುದ್ದ ಹೋರಾಟ ಮಾಡಿದ ಧೀüಮಂತ ನಾಯಕ. ಸ್ವಾತಂತ್ರ್ಯ ಪಡೆಯುವ ನಿಟ್ಟಿನಲ್ಲಿ ಆಜಾದ್ ಹಿಂದು ಫೌಜ್‍ಸೈನ್ಯವನ್ನು ಹುಟ್ಟುಹಾಕಿ ಸಾವಿರಾರು ಯುವಕರನ್ನು ಒಗ್ಗೂಡಿಸಿ ಬ್ರಿಟಿಷರ ವಿರುದ್ದ ಹೋರಾಟ ಮಾಡಿದರು. ಇಂದಿಗೂ ಪ್ರತಿಯೊಬ್ಬ ಭಾರತೀಯರ ಹೃದಯದಲ್ಲಿ ಅವರು ಜೀವಂತವಾಗಿ ಇದ್ದಾರೆ ಎಂದು ಈ ಸಂದರ್ಭದಲ್ಲಿ ನೆನಪಿಸಿದರು.

Contact Your\'s Advertisement; 9902492681

ನಮ್ಮ ಸರ್ಕಾರ ನೇತಾಜಿ ಸಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅಚರಿಸಬೇಕೆಂದು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಶಾಲಾ, ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಅಲ್ಲದೆ ವಸ್ತುಪ್ರದರ್ಶನ, ಚರ್ಚಾ ಸ್ಫರ್ಧೆ ಮತ್ತು ಸುಭಾಷ್ ಚಂದ್ರ ಬೋಸ್ ಕುರಿತ ಕೃತಿಗಳನ್ನು ಯುವಕರಿಗೆ ತಲುಪಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ  ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಸೇರಿದಂತೆ ಅಧಿಕಾರಿಗಳು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here