ಬೆಂಗಳೂರು: ನೇತಾಜಿ ಸಭಾಷ್ ಚಂದ್ರ ಬೋಸ್ ಅವರ ಆದರ್ಶ, ದೇಶಭಕ್ತಿ, ದೇಶಕ್ಕಾಗಿ ಮಾಡಿದ ತ್ಯಾಗ, ಎಲ್ಲರಿಗೂ ಅದರ್ಶ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾಡಿದರು.
ಇಂದು ನಮ್ಮ ದೇಶಕ್ಕೆ ಹೆಮ್ಮೆಯ ದಿನ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ವಿರುದ್ದ ಹೋರಾಟ ಮಾಡಿದ ಧೀüಮಂತ ನಾಯಕ. ಸ್ವಾತಂತ್ರ್ಯ ಪಡೆಯುವ ನಿಟ್ಟಿನಲ್ಲಿ ಆಜಾದ್ ಹಿಂದು ಫೌಜ್‍ಸೈನ್ಯವನ್ನು ಹುಟ್ಟುಹಾಕಿ ಸಾವಿರಾರು ಯುವಕರನ್ನು ಒಗ್ಗೂಡಿಸಿ ಬ್ರಿಟಿಷರ ವಿರುದ್ದ ಹೋರಾಟ ಮಾಡಿದರು. ಇಂದಿಗೂ ಪ್ರತಿಯೊಬ್ಬ ಭಾರತೀಯರ ಹೃದಯದಲ್ಲಿ ಅವರು ಜೀವಂತವಾಗಿ ಇದ್ದಾರೆ ಎಂದು ಈ ಸಂದರ್ಭದಲ್ಲಿ ನೆನಪಿಸಿದರು.
ನಮ್ಮ ಸರ್ಕಾರ ನೇತಾಜಿ ಸಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅಚರಿಸಬೇಕೆಂದು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಶಾಲಾ, ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಅಲ್ಲದೆ ವಸ್ತುಪ್ರದರ್ಶನ, ಚರ್ಚಾ ಸ್ಫರ್ಧೆ ಮತ್ತು ಸುಭಾಷ್ ಚಂದ್ರ ಬೋಸ್ ಕುರಿತ ಕೃತಿಗಳನ್ನು ಯುವಕರಿಗೆ ತಲುಪಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಸೇರಿದಂತೆ ಅಧಿಕಾರಿಗಳು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…